ದೇಶದ ಅದೆಷ್ಟೋ ಹಳ್ಳಿಗಳ ಜನ ಇಂದು ಕೂಡ ಕತ್ತಲಲ್ಲೇ ದಿನ ಸವೆಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನೇಕ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ನೀರು, ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಇಲ್ಲ. ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸಣಕಾ ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಆಂಬ್ಯುಲೆನ್ಸ್ ಬರಲಾಗದೇ ರೋಗಿಯನ್ನ ಗ್ರಾಮಸ್ಥರು ಕಂಬಳಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದಿದಿದ್ದಾರೆ.
ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿಯಾಗಿ ಇಲ್ಲದಿದ್ದರಿಂದ ರೋಗಿಯನ್ನ ಹೊತ್ತು ಆಸ್ಪತ್ರೆಗೆ ಸಾಗಿಸುವ ಅನಿವಾರ್ಯತೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಸಣಕಾ ಗ್ರಾಮಕ್ಕೆ ವಾಹನ ಸಂಚಾರಕ್ಕೆ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ ದ್ರೌಪದಿ ಪಾವು ದೇಸಾಯಿ(80) ವೃದ್ಧೆಯನ್ನು ಗ್ರಾಮಸ್ಥರು ಕಂಬಳಿ ಜೋಲಿಯಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಂಬುಲೆನ್ಸ್ ಬರಲು ಸಾಧ್ಯವಾಗದ ಕಾರಣ ಸುಮಾರು 2.5 ಕಿಮೀ ದೂರ ಜೋಲಿಯಲ್ಲೇ ಹೊತ್ತೊಯ್ದು ಬಳಿಕ ವಾಹನದ ಮೂಲಕ ದಾಂಡೇಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರತ ದೇಶದ ಕಟ್ಟಕಡೆಯ ಹಳ್ಳಿಗಳಿಗೂ ಮೂಲ ಸೌಕರ್ಯ ಕಲ್ಪಿಸುವುದೇ ಮೊದಲ ಆದ್ಯತೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ದಿನ ಬೊಬ್ಬಿಡುತ್ತಿವೆ. ಆದರೆ ರಾಜ್ಯದಲ್ಲಿ ಈ ರೀತಿಯ ಅದೆಷ್ಟೋ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾವಣೆ ಬಂದಾಗ ಜನರನ್ನು ದೇವರು ಎಂದು ಹೇಳುವ ಅದೆಷ್ಟೋ ಜನಪ್ರತಿನಿಧಿಗಳು ಎಲೆಕ್ಷನ್ ಮುಗಿದ ಮೇಲೆ ಗ್ರಾಮಗಳತ್ತ ಕಣ್ಣೆತ್ತಿ ನೋಡಲ್ಲ. ಆಮೇಲೆ ಅವರವರ ಪಾಡು ಅವರವರಿಗೆ ಅಷ್ಟೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…