ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ. ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

