ವಿಧಾನಸಭೆ ಚುನಾವಣೆ |ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಎಎಪಿ | ಸುಳ್ಯ, ಮಂಗಳೂರು, ಮೂಡಬಿದ್ರೆ ಅಭ್ಯರ್ಥಿ ಘೋಷಣೆ |

March 20, 2023
2:41 PM

ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ  ಆಮ್ ಆದ್ಮಿ ಪಕ್ಷವು  ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 80 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೆಸರುಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಏಳು ಮಂದಿ ಮಹಿಳೆಯರಿಗೆ ಸ್ಥಾನ ದೊರಕಿದೆ.  

Advertisement

ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಅಭ್ಯರ್ಥಿಯಾಗಿ ಸುಮನಾ , ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಸಂತೋಷ್‌ ಕಾಮತ್‌, ಮೂಡಬಿದರೆ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ. ಕಾರ್ಕಳದಿಂದ ಡ್ಯಾನಿಯಲ್‌ ಸ್ಫರ್ಧೆಗೆ ಇಳಿದಿದ್ದಾರೆ.

ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ,ಆಮ್‌ ಆದ್ಮಿ ಪಕ್ಷದಲ್ಲಿ ಈಗ  ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.

ನಮ್ಮ ಪಕ್ಷ ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ. ದೇಶವನ್ನು ಉನ್ನತಿಯತ್ತ ಕರೆದೊಯ್ಯಲು ನಾವು ಕಣಕ್ಕಿಳಿಸಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.‌ ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬನ ಹಕ್ಕುಗಳನ್ನು ಕಾಪಾಡುತ್ತೇವೆ ಎಂದರು.

Advertisement

ನಮ್ಮದು ಯುವಕರೆ ಹೆಚ್ಚಿರುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ಎಎಪಿ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳೇ ಇದ್ದಾರೆ ಎಂದು ಅವರು ಹೇಳಿದರು.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-07-2025 | ದಿಢೀರನೆ ಬದಲಾಯ್ತು ಹವಾಮಾನ | ಹೇಗಿರಬಹುದು ಹವಾಮಾನ..? | ಕರಾವಳಿ ಭಾಗದಲ್ಲಿ ಮಳೆ ಜಾಸ್ತಿ ಇರಬಹುದು ಏಕೆ..?
July 7, 2025
1:58 PM
by: ಸಾಯಿಶೇಖರ್ ಕರಿಕಳ
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ
July 7, 2025
11:01 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ
July 7, 2025
10:58 AM
by: The Rural Mirror ಸುದ್ದಿಜಾಲ
ಶುಕ್ರವಾರ ಈ ಪರಿಹಾರ ಮಾಡಿ ಸಾಕು, ಹಣದ ಸಮಸ್ಯೆ ಮಾಯವಾಗುತ್ತೆ
July 7, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group