ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 80 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಹೆಸರುಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಏಳು ಮಂದಿ ಮಹಿಳೆಯರಿಗೆ ಸ್ಥಾನ ದೊರಕಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ಅಭ್ಯರ್ಥಿಯಾಗಿ ಸುಮನಾ , ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಸಂತೋಷ್ ಕಾಮತ್, ಮೂಡಬಿದರೆ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಸ್ಪರ್ಧಿಸುತ್ತಿದ್ದಾರೆ. ಕಾರ್ಕಳದಿಂದ ಡ್ಯಾನಿಯಲ್ ಸ್ಫರ್ಧೆಗೆ ಇಳಿದಿದ್ದಾರೆ.
ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ,ಆಮ್ ಆದ್ಮಿ ಪಕ್ಷದಲ್ಲಿ ಈಗ ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ನಮ್ಮ ಮೊದಲ ಪಟ್ಟಿಯಲ್ಲಿ 7 ರೈತರು ಇರುವುದು ನಮಗೆ ಖುಷಿ ತಂದಿದೆ. ನಮ್ಮ ಜನಸಂಖ್ಯೆಯ ಶೇ. 50ರಷ್ಟು ಮಹಿಳೆಯರು, ಮತ್ತು ಬೇರೆ ಪಕ್ಷಗಳು ಅವರನ್ನು ನಾಮನಿರ್ದೇಶನ ಮಾಡದ ಕಾರಣ ಮಹಿಳೆಯರಿಗೆ ಸಾರ್ವಜನಿಕ ಹುದ್ದೆಯನ್ನು ಪಡೆಯುವುದು ಕಷ್ಟವಾಗಿದೆ. ನಮ್ಮ ಮೊದಲ ಪಟ್ಟಿಯಲ್ಲಿ 7 ಮಹಿಳೆಯರಿದ್ದಾರೆ ಎನ್ನಲು ನಾವು ಸಂತೋಷಪಡುತ್ತೇವೆ ಎಂದರು.
ನಮ್ಮ ಪಕ್ಷ ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ. ದೇಶವನ್ನು ಉನ್ನತಿಯತ್ತ ಕರೆದೊಯ್ಯಲು ನಾವು ಕಣಕ್ಕಿಳಿಸಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. ಶೇ. 100ರಷ್ಟು ಭ್ರಷ್ಟಾಚಾರರಹಿತ ಆಡಳಿತ ನೀಡುವುದು ಮಾತ್ರವಲ್ಲದೇ, ಪ್ರತಿಯೊಬ್ಬನ ಹಕ್ಕುಗಳನ್ನು ಕಾಪಾಡುತ್ತೇವೆ ಎಂದರು.
ನಮ್ಮದು ಯುವಕರೆ ಹೆಚ್ಚಿರುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ಎಎಪಿ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳೇ ಇದ್ದಾರೆ ಎಂದು ಅವರು ಹೇಳಿದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…