ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ವರ್ಷಗಳಿಂದ ತುಂಬಿರುವ ಕಸವನ್ನು ವಿಲೇವಾರಿ ಮಾಡಬೇಕೆಂದು ನಟ ಅನಿರುದ್ದ್ ಮಾಡಿರುವ ವಿಡಿಯೋ ಮನವಿಗೆ ವಾಟ್ಸಾಪ್ ಕಾಮೆಂಟ್ ಮೂಲಕ “ಅನಿರುದ್ದ್ 10 ಲಾರಿ ಕಳುಹಿಸಿ ಕೊಡಲಿ” ಎಂದು ಸವಾಲು ಹಾಕುವ ಮೂಲಕ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರು ತನ್ನ ವೈಫಲ್ಯನ್ನು ಒಪ್ಪಿಕೊಂಡಿದೆ. ತಮಗೆ ನಗರದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಅದಕ್ಕಾಗಿ ಖಾಸಗಿ ವ್ಯಕ್ತಿಗಳ ಸಹಾಯ ಕೋರಿ ತಮ್ಮ ಅಸಹಾಯಕತೆಯನ್ನು ತೋರಿಸಿದೆ ಎಂದು ಸುಳ್ಯ ಕ್ಷೇತ್ರ ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ, ದಕ್ಷಿಣ ಕನ್ನಡ & ಉಡುಪಿ ವೀಕ್ಷಕ, ಅಶೋಕ್ ಎಡಮಲೆಯವರು ‘ನಟ ಅನಿರುದ್ದ್ ರವರು ಸಾಮಾಜಿಕ ಕಾಳಜಿಯ ವಿಡಿಯೋ ಹಂಚಿಕೊಂಡಿದ್ದರು. ಕಸದ ಸಮಸ್ಯೆಯನ್ನು ಪರಿಹರಿಸುವ ಬದಲು ಸಮಸ್ಯೆಯ ಗಮನ ಸೆಳೆದ ನಟನ ವಿರುದ್ಧ ಹೇಳಿಕೆ ನೀಡಿರುವ ಪಂಚಾಯತ್ ಅಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ. ನಗರ ಪಂಚಾಯತಿಗೆ 10 ಲಾರಿ ಬೇಕಿದ್ದರೆ ಅದನ್ನು ಒದಗಿಸುವ ಕಾರ್ಯವನ್ನು ಮಾಡಲು ಆಮ್ ಆದ್ಮಿ ಪಕ್ಷ ಸಿದ್ಧವಿದೆ, ಪಂಚಾಯತ್ ಅಧಿಕೃತ ಪತ್ರದ ಮೂಲಕ ಲಾರಿಯ ಅಗತ್ಯತೆ ಮತ್ತು ಕಸ ಹಾಕುವ ಸ್ಥಳವನ್ನು ಖಚಿತಪಡಿಸಬೇಕು.’ ಎಂದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…