ಜು.26 | ಎಎಪಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಂಗಳೂರಿಗೆ ಭೇಟಿ |

July 25, 2022
7:57 PM

ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ ಭೇಟಿಯ ಹಿನ್ನೆಲೆಯಲ್ಲಿ ದಕ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.

Advertisement
Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಮ್‌ ಆದ್ಮಿ ಪಾರ್ಟಿ ಸಂಘಟನೆ ಬಿರುಸಿನಿಂದ ನಡೆಯುತ್ತಿದ್ದು ಈಗಾಗಲೇ ಮಂಗಳೂರು ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲಿ  ಆಮ್‌ ಆದ್ಮಿ ಪಾರ್ಟಿ ಸಂಘಟನೆ ಆರಂಭವಾಗಿದೆ. ಅನೇಕರು ಪಕ್ಷದ ಪರವಾಗಿ ಒಲವು ತೋರಿದ್ದಾರೆ. ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಲ್ಲಿ ಪಕ್ಷದ ಬೆಳವಣಿಗೆ ಆರಂಭವಾಗಿದ್ದು ಹಲವಾರು ಮಂದಿ ಸದಸ್ಯರಾಗಿದ್ದಾರೆ. ಇದೀಗ ಪಕ್ಷಕ್ಕೆ ಆಗಮಿಸಲು ಜಿಲ್ಲೆಯ ಪ್ರಮುಖರು ಆಸಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದ ಕ ಜಿಲ್ಲೆಗೆ ಆಗಮಿಸುವ ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭೇಟಿ ಮಾಡುವರು.

Advertisement

ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡುವ ಭಾಸ್ಕರ ರಾವ್‌ ಅವರು ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್  ತಿಳಿಸಿದ್ದಾರೆ.ಪಕ್ಷದ ಕಾರ್ಯಕರ್ತರು ಹಾಗೂ ಆಸಕ್ತರು ಸಭೆಗೆ ಆಗಮಿಸಲು ಕೋರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror