ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ ಭೇಟಿಯ ಹಿನ್ನೆಲೆಯಲ್ಲಿ ದಕ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಸಂಘಟನೆ ಬಿರುಸಿನಿಂದ ನಡೆಯುತ್ತಿದ್ದು ಈಗಾಗಲೇ ಮಂಗಳೂರು ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಸಂಘಟನೆ ಆರಂಭವಾಗಿದೆ. ಅನೇಕರು ಪಕ್ಷದ ಪರವಾಗಿ ಒಲವು ತೋರಿದ್ದಾರೆ. ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಲ್ಲಿ ಪಕ್ಷದ ಬೆಳವಣಿಗೆ ಆರಂಭವಾಗಿದ್ದು ಹಲವಾರು ಮಂದಿ ಸದಸ್ಯರಾಗಿದ್ದಾರೆ. ಇದೀಗ ಪಕ್ಷಕ್ಕೆ ಆಗಮಿಸಲು ಜಿಲ್ಲೆಯ ಪ್ರಮುಖರು ಆಸಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದ ಕ ಜಿಲ್ಲೆಗೆ ಆಗಮಿಸುವ ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭೇಟಿ ಮಾಡುವರು.
ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡುವ ಭಾಸ್ಕರ ರಾವ್ ಅವರು ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.ಪಕ್ಷದ ಕಾರ್ಯಕರ್ತರು ಹಾಗೂ ಆಸಕ್ತರು ಸಭೆಗೆ ಆಗಮಿಸಲು ಕೋರಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…