ಎಎಪಿ ಪ್ರಚಾರ ಅಭಿಯಾನ | ಸುಳ್ಯದಲ್ಲಿ ಸುಮನ ಅವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ | ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ವಿಶ್ವಾಸ |

May 6, 2023
1:21 PM
ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ  ಅಶೋಕ್ ಎಡಮಲೆ ಹೇಳಿದರು.
ಅವರು ಗುತ್ತಿಗಾರಿನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.  ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ ಚಿಂತನೆ ಮತ್ತು ಯೋಜನೆಯಿದೆ, ಅದನ್ನು ಸರ್ಕಾರಿ ಆಡಳಿತದ ಮಟ್ಟದಲ್ಲಿ ಸಮರ್ಥವಾಗಿ ಮಂಡಿಸಿ ಅನುಷ್ಠಾನಗೊಳಿಸುವ ಸಾಮರ್ಥ್ಯವಿದೆ. ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ  ಸುಮನ ಬೆಳ್ಳಾರ್ಕರ್  ವಿಜಯ ಶತಸಿದ್ಧ, ಆ ಮೂಲಕ ಕ್ಷೇತ್ರದ ಅಭಿವೃದ್ಧಿ ಪರ್ವಕ್ಕೆ ನಾಂದಿಯಾಗಲಿದೆ” ಎಂದು  ಹೇಳಿದರು.
ಪಕ್ಷದ ಅಭ್ಯರ್ಥಿ ಸುಮನ ಬೆಳ್ಳಾರ್ಕರ್ ಮಾತನಾಡಿ, “ಕ್ಷೇತ್ರದ ಯಾವುದೇ ಅಭಿವೃದ್ಧಿ ಕಾಣದೆ 25 ವರ್ಷಗಳ ಹಿಂದಕ್ಕೆ ಸರಿದಿದೆ. ಮೂಲಭೂತ ನೌಕಾರ್ಯಗಳು ಅಭಿವುದ್ಧಿ ಕಾಣದೆ ಜನ ಸಾಮಾನ್ಯರು ಕಷ್ಟ ಅನುಭವಿಸುತ್ತಾ ಇದ್ದಾರೆ. ಶಿಕ್ಷಣ, ಆರೋಗ್ಯದ ಕಡೆ ಗಮನವೇ ಇಲ್ಲದೆ ಹಲವಾರು ಸರ್ಕಾರಿ ಶಾಲೆ ಕಾಲೇಜು ಕಟ್ಟಡಗಳು ಶಿಥಿಲ ಹೊಂದಿದೆ, ಅಧ್ಯಾಪಕರು ಉಪನ್ಯಾಸಕರ ಕೊರತೆ ಇದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಮತ್ತು ಸರಿಯಾದ ಟೆಸ್ಟ್, ಚಿಕಿತ್ಸೆ ಕೊರತೆಯಿಂದಾಗಿ ಜನಸಾಮಾನ್ಯರು ಸಾವಿರಾರು ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ಪಡೆಯು ಸ್ಥಿತಿ ಇದೆ. ಹಲವು ದಶಕಗಳಿಂದ ಮನೆಯ ಭೂ ಆಧಾರ ಇಲ್ಲದೆ ಜನ ಕಂಗೆಟ್ಟಿದ್ದಾರೆ. ಒಟ್ಟಿನಲ್ಲಿ ಸಮಸ್ಯೆಯ ಆಗರವಾಗಿರುವ ಕ್ಷೇತ್ರಕ್ಕೆ ಸಮರ್ಥ ಜನಪ್ರಯಿನಿಧಿಯ ಅಗತ್ಯವಿದೆ. ಅದನ್ನು ಪೂರೈಸಲು ನನ್ನಿಂದ ಸಾಧ್ಯ, ಆದ್ದರಿಂದ ನನಗೆ ಮತ ನೀಡಿ ಗೆಲ್ಲಿಸಬೇಕು” ಎಂದು ವಿನಂತಿಸಿದರು.
ಸಭೆಯಲ್ಲಿ ಆಪ್ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾ ಪ್ರಧಾನ ಮುಖಂಡ ವೇಣುಗೋಪಾಲ್ ಪುಚ್ಚಪ್ಪಾಡಿ,  ದೀಪಕ್ ಶೆಣೈ ಪಿ ಹಳೆಗೇಟು,  ಗಣೇಶ್ ಪ್ರಸಾದ್ ಭಟ್ ಕಂದಡ್ಕ, ಮುಖಂಡರಾದ ರಾಮಕೃಷ್ಣ ಬೀರಮಂಗಲ, ಗುರುಪ್ರಸಾದ್ ಮೇರ್ಕಜೆ, ರಶೀದ್ ಜಟ್ಟಿಪ್ಪಳ್ಳ, ಖಲಂದರ್ ಎಲಿಮಲೆ,  ಗಂಗಾಧರ ಗೌಡ, ರವಿಪ್ರಕಾಶ್‌ ರಾವ್‌, ಜೋಸೆಫ್‌ ಪಿರೇರಾ, ಶಾಲಿನ್‌ ಪಿಂಟೋ, ವರ್ಷಿತ್‌ ಕುಲಾಲ್‌  ಮುಂತಾದವರು ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror