ಪುತ್ತೂರಿನಲ್ಲಿ ಎಎಪಿ ಅಭ್ಯರ್ಥಿ ಡಾ.ವಿಶುಕುಮಾರ್‌ ನಾಮಪತ್ರ ಸಲ್ಲಿಕೆ | ಎ.18 ರಂದು ಸುಳ್ಯದಲ್ಲಿ ಎಎಪಿ ಅಭ್ಯರ್ಥಿ ಸುಮನಾ ನಾಮಪತ್ರ ಸಲ್ಲಿಕೆ |

April 17, 2023
9:49 PM

ಆಮ್‌ ಆದ್ಮಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶುಕುಮಾರ್‌ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು. ಸುಳ್ಯದ ಅಭ್ಯರ್ಥಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್‌ ಅವರು ಎ.18 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ವಿಶುಕುಮಾರ್‌ ಅವರು, ಶಿಕ್ಷಣ , ಆರೋಗ್ಯ ಹಾಗೂ ಗ್ರಾಮೀಣ ಅಭಿವೃದ್ಧಿ ಕಡೆಗೆ  ಗಮನಹರಿಸುತ್ತೇನೆ ಎಂದರು. ‌

ನಾಮಪತ್ರ ಸಲ್ಲಿಕೆ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ, ಆಮ್‌ ಆದ್ಮಿ ಪಕ್ಷವು ಕೆಲವೇ ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದಿದೆ. ದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೇವೆಗಳ ಕಡೆಗೆ ಗಮನಹರಿಸುತ್ತಿದೆ. ಎಲ್ಲರಿಗೂ ಉತ್ತಮ ಸೇವೆ ನೀಡುವುದೇ ಉದ್ದೇಶವಾಗಿದೆ ಎಂದರು. ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಮಾಜಿಕ ಕಾಳಜಿ ಇರುವ ಸುಶಿಕ್ಷಿತರನ್ನೇ ಪಕ್ಷವು ಆಯ್ಕೆ ಮಾಡುತ್ತದೆ. ಪುತ್ತೂರಿನಲ್ಲಿ ಕೃಷಿ ವಿಜ್ಞಾನಿ ಸ್ಫರ್ಧೆ ಮಾಡಿದರೆ ಸುಳ್ಯದಲ್ಲಿ ಎಂಬಿಎ ಪದವೀಧರೆ  ಸ್ಫರ್ಧೆ ಮಾಡುತ್ತಿದ್ದಾರೆ ಎಂದರು.

ಸುಳ್ಯ ವಿಧಾನಸಭಾ  ಕ್ಷೇತ್ರದ ಶಾಸಕ ಸ್ಥಾನದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಅವರು ಎ.18 ರಂದು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror