ಬಂಟ್ವಾಳದ ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಕಚೇರಿಯ ಉದ್ಘಾಟನೆ ನೆರವೇರಿತು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಕಡೆಗೆ ಮತದಾರರು ಒಲು ತೋರುತ್ತಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಯನ್ನು ಹೊಂದಿರುವ ಜನರೆಲ್ಲಾ ಒಂದಾಗಿ ಈ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಆವಶ್ಯಕತೆಯನ್ನು ಪೂರೈಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಒಂದಾಗಿ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷವನ್ನು ಬೆಳೆಸಬೇಕಿದೆ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ , ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಮೊಯಿಸಿನ್ ರಾಣಾ ಸ್ವಾಗತಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.