ಕರ್ನಾಟಕ ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಸೌಲಭ್ಯ, ವೈದ್ಯಕೀಯ ಸೌಲಭ್ಯದೊಂದಿಗೆ ಶೂನ್ಯ ಪರ್ಸೆಂಟ್ ಕಮೀಷನ್- ನೂರು ಪರ್ಸೆಂಟ್ ಕೆಲಸ ಮಾಡಿ ತೋರಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.
ಅವರು ಮಂಗಳವಾರ ಮಂಗಳೂರು ನಗರದ ಡಾನ್ ಬಾಸ್ಕೋ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ವತಿಯಂದ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಕಚೇರಿ ಉದ್ಘಾಟನಾ ಸಮಾರದಂಭದಲ್ಲಿ ಮಾತನಾಡಿದರು. ಮಂಗಳೂರು ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷವು ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ದೇಶದಲ್ಲೇ ಮೊದಲ ಸ್ಥಾನ ಮಂಗಳೂರಿನಲ್ಲಿದೆ.
ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ವ್ಯಕ್ತಪಡಿಸಿದ ಪೃಥ್ವಿ ರೆಡ್ಡಿ, ಕರ್ನಾಟಕದ ಜನತೆಯೂ ಎಎಪಿಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಕಮಿಶನ್ ದಂಧೆಯಲ್ಲಿ ಜನರು ರೋಸಿ ಹೋಗಿದ್ದಾರೆ, ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಹೀಗಾಗಿ ನಾವು ಜನರಲ್ಲಿ ಓಟು ಕೇಳಬೇಕಾಗಿಲ್ಲ. ನಾವು ಇದ್ದೇವೆ ಎಂದು ಪ್ರತಿ ಬೂತುಗಳಲ್ಲಿ ಕೂಡ ಮನವರಿಕೆ ಮಾಡಿದರೆ ಸಾಕು ಎಂದು ಪೃಥ್ವಿ ರೆಡ್ಡಿ ಹೇಳಿದರು. ಈಗ ಕರಾವಳಿ ಜಿಲ್ಲೆಗಳಲ್ಲೂ ಅಭಿವೃದ್ಧಿ ಮರೀಚಿಕೆಯಾಗಿದೆ. ಹೀಗಾಗಿ ಕರಾವಳಿಯ ಜಿಲ್ಲೆಗಳಲ್ಲಿ ಪಕ್ಷವನ್ನು ಕಟ್ಟಲು ಸಾಧ್ಯವಿದೆ ಎಂಬ ವಿಶ್ವಾಸವನ್ನು ದೊಡ್ಡ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ನೀಡಿದ್ದಾರೆ ಎಂದು ಹೇಳಿದರು.
ಸಭಾಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಸಂತೋಷ್ ಕಾಮತ್ , ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಕನಿಷ್ಟ ಒಬ್ಬ ಶಾಸಕರನ್ನು ಗೆಲ್ಲಿಸಿಕೊಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಎಎಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಪುರುಷೋತ್ತಮ ಕೊಲ್ಪೆ ಸ್ವಾಗತಿಸಿದರು. ಸಂದೀಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದನ್ನು ಶ್ಲಾಘಿಸಿದ ಎಎಪಿ ಬೆಂಬಲಿಗ ನಾರಾಯಣ ಪ್ರಭು ಅವರು ಸಮಾವೇಶದಲ್ಲಿ ಮಾತನಾಡಿ, ನಾವು ಜನಸಂಘದ ಕಾಲದಿಂದಲೂ ಆರ್ ಎಸ್ ಎಸ್ ಬಿಜೆಪಿಗಾಗಿ ಕೆಲಸ ಮಾಡುತ್ತಾ ಬಂದಿದ್ದೇವೆ. ನಮ್ಮ ಪರಿಸರದಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕಾಳಜಿ ಆಡಳಿತ ನಡೆಸುವವರಿಗೆ ಇಲ್ಲ. ಇವರಿಗೆ ಆಗುವುದಿಲ್ಲವಾದರೆ ಮನೆಯಲ್ಲಿ ಇರಬಹುದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ನನ್ನಂತೆಯೇ ಅನೇಕರು ಈ ಆಡಳಿತದಿಂದ ಭ್ರಮನಿರಸನಗೊಂಡವರು ಇದ್ದಾರೆ ಎಂದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…