ಸಂತೋಷ್ ಕಾಮತ್
ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರು ಜಿಲ್ಲಾ ಪ್ರವಾಸ ಆರಂಭಿಸಿದ್ದು ಎ.29 ರಂದು ಪುತ್ತೂರು, ಕಡಬ ಮತ್ತು ಸುಳ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಎಪಿ ದಕ ಜಿಲ್ಲೆ ಹಾಗೂ ಉಡುಪಿ ವೀಕ್ಷಕ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಪಕ್ಷ ಸಂಘಟನೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಮತ್ತು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷದ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಹೀಗಾಗಿ ಪುತ್ತೂರು, ಸುಳ್ಯ, ಕಡಬ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಪ್ರದೇಶದ ಪಕ್ಷದ ಅಭಿಮಾನಿಗಳನ್ನು ಹಾಗೂ ಹಿರಿಯರನ್ನು, ಪಕ್ಷದ ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಭಾಗಗಳಲ್ಲಿನ ಜನಸಾಮಾನ್ಯರನ್ನು ಜಿಲ್ಲಾಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಎಂದು ಅಶೋಕ್ ಎಡಮಲೆ ತಿಳಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿನ ಪಕ್ಷದ ಸದಸ್ಯರು ಆಸಕ್ತರು , ಪುತ್ತೂರು ಪ್ರೆಸ್ ಕ್ಲಬ್ ಬಳಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕಾಮತ್ ತಂಡವನ್ನು ಎ.29 ರಂದು ಬೆಳಗ್ಗೆ 10.15 ರ ವೇಳೆಯಲ್ಲಿ ಭೇಟಿಯಾಗಬಹುದಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ ಪಕ್ಷದ ಸದಸ್ಯರು ಆಸಕ್ತರು , ಜಿಲ್ಲಾ ಅಧ್ಯಕ್ಷರ ತಂಡವನ್ನು ಎ.29 ಸಂಜೆ 5:30 ರ ವೇಳೆಯಲ್ಲಿ ಹಳೆಗೇಟು ಬಳಿಯಲ್ಲಿನ ಸಂತೃಪ್ತಿ ಹೋಟೇಲ್ ಬಳಿ ಭೇಟಿಯಾಗಬಹುದು ಎಂದು ಅಶೋಕ್ ಎಡಮಲೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಅಶೋಕ್ ಎಡಮಲೆ ಅವರನ್ನು 8861546080 ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…