Advertisement
ಸುದ್ದಿಗಳು

ನ.1 | ಮಂಗಳೂರಿನಲ್ಲಿ ಎಎಪಿ ಕಚೇರಿ ಉದ್ಘಾಟನೆ | ತಳಮಟ್ಟದಿಂದಲೇ ಎಎಪಿ ಸಂಘಟನೆ |

Share

ದೇಶದಲ್ಲಿ  ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾದ ಆಮ್‌ ಆದ್ಮಿ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ನೂತನ ಕಚೇರಿಯು ನ.1 ರಂದು ಉದ್ಘಾಟನೆಗೊಳ್ಳಲಿದೆ ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ.

Advertisement
Advertisement
Advertisement

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ದೇಶದಲ್ಲಿ ಈಗಾಗಲೇ ಭ್ರಷ್ಟಾಚಾರ ರಹಿತ ಪಕ್ಷವಾಗಿ ಬೆಳೆಯುತ್ತಿರುವ ಎಎಪಿ ದೆಹಲಿ, ಪಂಜಾಬ್‌ ರಾಜ್ಯಗಳಲ್ಲಿ ಬಲಿಷ್ಟ ರಾಜಕೀಯ ಸಂಘಟನೆಯಾಗಿದೆ. ಅಲ್ಲಿ ಸರ್ಕಾರವನ್ನು ರಚಿಸಿ ಇತರ ರಾಜ್ಯಗಳಲ್ಲಿ ಕೂಡ ಜನ ಬೆಂಬಲವನ್ನು ಪಡೆಯುತ್ತಿದೆ. ಮುಂಬರುವ ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೂಡ ನಮ್ಮ ಆಮ್ ಆದ್ಮಿ ಪಾರ್ಟಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಕರ್ನಾಟಕದಲ್ಲಿ ಕೂಡ ಆಮ್ ಆದ್ಮಿ ಪಾರ್ಟಿ ತನ್ನ ಸಂಘಟನೆಯನ್ನು ವಿಸ್ತರಿಸುತ್ತಿದೆ. ತಳಮಟ್ಟದಿಂದಲೇ ಸಂಘಟನೆಯನ್ನು ಬೆಳೆಸಲಾಗುತ್ತಿದೆ.ಈಗಾಗಲೇ  ಗ್ರಾಮ ಸಂಪರ್ಕ ಅಭಿಯಾನವನ್ನುಆರಂಭಿಸಲಾಗಿದೆ. ಪಕ್ಷದ ಪರವಾಗಿ ಜನಸ್ಪಂದನೆ  ಉತ್ತಮವಾಗಿದೆ.ಮಹಿಳಾ, ಯುವ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಪಂಗಡ, ವ್ಯಾಪಾರಿಗಳು, ರೈತರು, ವೃತ್ತಿಪರರು ಸೇರಿರುವ ಹತ್ತು ಮಂಚೂಣಿ ಸಂಘಟನೆಗಳನ್ನು ರೂಪಿಸಿದೆ. ಎಂದು ಸಂತೋಷ್‌ ಕಾಮತ್‌ ಹೇಳಿದರು.

Advertisement

ಆಮ್ ಆದ್ಮಿ ಪಾರ್ಟಿಯ ಸದಸ್ಯತನ ಅಭಿಯಾನ ಕೂಡ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಕ್ಷದ ಸದಸ್ಯರಾಗಲು ಆಸಕ್ತಿ ತೋರಿಸಿದ್ದಾರೆ. ಸದಸ್ಯರಾಗ ಬಯಸುವವರು ಆನ್ ಲೈನ್ ಮೂಲಕ ಫಾರ್ಮ್ ಭರ್ತಿ ಮಾಡಬೇಕಾಗುತ್ತದೆ.
ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಎಎಪಿ ಸರ್ಕಾರದ ಸಾಧನೆಯನ್ನು ಗಮನಿಸಿ, ಆರೋಗ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ನಾವು ಮಾಡಿರುವ ಬದಲಾವಣೆಯನ್ನು ಗುರುತಿಸಿ ಜನರು ನಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ.

ಇದೀಗ  ಮಂಗಳೂರಿನಲ್ಲಿ ಪಕ್ಷದ ಕಚೇರಿ ಆರಂಭಿಸಿದ್ದು ಮಂಗಳೂರು ನಗರದ ಬಲ್ಮಠ ರಸ್ತೆಯ ಸೋಜ ಆರ್ಕೇಡ್ (ಡಾ.ಅಂಬೇಡ್ಕರ್ ವೃತ್ತದ ಸಮೀಪ)ನಲ್ಲಿ ಸಿದ್ಧವಾಗಿರುವ ಪಕ್ಷದ ನೂತನ ಕಚೇರಿಯನ್ನು ಆಮ್ ಆದ್ಮಿ ಪಾರ್ಟಿಯ ಹಿತೈಷಿಗಳಾದ, ಅನಿವಾಸಿ ಭಾರತೀಯ  ಮೈಕಲ್ ಡಿಸೋಜ ಅವರು ನ.1 ರಂದು ರಾಜ್ಯೋತ್ಸವ ದಿನದಂದು  ಸಂಜೆ 4.30ಕ್ಕೆ ಪಕ್ಷದ ಕಚೇರಿ  ಉದ್ಘಾಟಿಸಲಿದ್ದಾರೆ.ಅದಕ್ಕೂ  ಮುನ್ನ ನಗರದ ಪಂಪ್ ವೆಲ್ ವೃತ್ತದಿಂದ ಸಂಜೆ 3.30 ಕ್ಕೆ ಪಾದಯಾತ್ರೆ ನಡೆಯಲಿದೆ. ಪಂಪ್ ವೆಲ್ ವೃತ್ತದ ಸಮೀಪ ಸಂಜೆ ಗಂಟೆ 3 ಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಿದರು.

Advertisement

ಕಚೇರಿ ಉದ್ಘಾಟನೆ  ನಂತರ ಡಾನ್ ಬಾಸ್ಕೋ ಸಭಾಂಗಣದಲ್ಲಿ ಸಂಜೆ ಗಂಟೆ 5.15ಕ್ಕೆ ಸಾರ್ವಜನಿಕ ಸಮಾವೇಶ ನಡೆಯಲಿದೆ. ಎಎಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶದಲ್ಲಿ ಎಎಪಿ ಕರ್ನಾಟಕ ಅಧ್ಯಕ್ಷ ಪೃಥ್ವಿ ರೆಡ್ಡಿ, ಪಕ್ಷದ ಕೇಂದ್ರ ಸಮಿತಿ ಸದಸ್ಯ ಅಶೋಕ್ ಎಡಮಲೆ, ರಾಜ್ಯ ಜಂಟಿ ಕಾರ್ಯದರ್ಶಿ ವಿವೇಕಾನಂದ ಸಾಲಿನ್ಸ್, ಮೈಕಲ್ ಡಿಸೋಜ ಮುಂತಾದವರು ಜನತೆಯನ್ನು ಉದ್ದೇಶಿಸಿ ಮಾತನಾಡಲಿರುವರು. ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯತ್ಸವ ಕೂಡ ಆಚರಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ  ಎಎಪಿ  ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗಾ, ಸಹ ಕಾರ್ಯದರ್ಶಿ ಡೆಸ್ಮಂಡ್ ಡಿಸೋಜಾ
ಜೇಮ್ಸ್ ಡಿಸಾ ಹಾಗೂ ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…

3 days ago

ಮುಂಜಾನೆ ಏಳಬೇಕು, ಬೇಗನೇ ಏಳಬೇಕು

ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…

3 days ago

ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |

ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…

4 days ago

ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…

4 days ago

ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…

4 days ago

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?

ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…

4 days ago