Advertisement
ಸುದ್ದಿಗಳು

ಆಮ್‌ ಆದ್ಮಿ ಪಾರ್ಟಿ | ಗ್ರಾಮ ಸಂಪರ್ಕ ಅಭಿಯಾನ | ಝೋನಲ್‌ ಸಂಘಟನಾ ಉಸ್ತುವಾರಿ ಕೆ.ಮಥಾಯಿ |

Share
  • ಪಕ್ಷ ಸಂಘಟನೆಯಲ್ಲಿ ಸಕ್ರಿಯವಾದ ಆಮ್‌ ಆದ್ಮಿ ಪಾರ್ಟಿ | ಗ್ರಾಮೀಣ ಜನರ ಸೇವೆಗೂ ಯೋಜನೆ ರೂಪಿಸಿದ ಎಎಪಿ | ಮಾಜಿ ಕೆಎಎಸ್‌ ಅಧಿಕಾರಿ ಕೆ ಮಥಾಯಿ ಅವರು ದ ಕ ಜಿಲ್ಲೆಗೆ ಎಂಟ್ರಿ | ಆನ್‌ ಲೈನ್  ಸದಸ್ಯತ್ವ ಅಭಿಯಾನಕ್ಕೆ  ಚಾಲನೆ‌ |

ಆಮ್‌ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನದ ಝೋನಲ್‌ ಸಂಘಟನಾ ಉಸ್ತುವಾರಿಯಾಗಿ ಪಕ್ಷದ ಮುಖಂಡ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಅವರು ನೇಮಕವಾಗಿದ್ದಾರೆ. ಈಚೆಗೆ ನಡೆದ ಪಕ್ಷದ ಸಭೆಯಲ್ಲಿ  ಈ ಆಯ್ಕೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಝೋನ್‌ ಉಸ್ತುವಾರಿಯನ್ನು ಕೆ.ಮಥಾಯಿ ವಹಿಸಿಕೊಂಡಿದ್ದಾರೆ.

ಗ್ರಾಮೀಣ ಭಾಗಗಳಲ್ಲೂ ಆಮ್‌ ಆದ್ಮಿ ಪಾರ್ಟಿಯನ್ನು  ಬೆಳೆಸುವುದು ಹಾಗೂ ಹಲವು ವರ್ಷಗಳಿಂದ ಇರುವ ಮೂಲಭೂತ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು  ಹಾಗೂ ಸಮಸ್ಯೆ ನಿವಾರಣೆಗೆ ಜನರ ಜೊತೆ ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಿದೆ. ಪಕ್ಷ ಸಂಘಟನೆ ಹಾಗೂ ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶ ಹೊಂದುವುದು ಮುಖ್ಯ ಎಂದು ಸಭೆಯಲ್ಲಿ  ಚರ್ಚಿಸಲಾಗಿದೆ. ಇದೇ ವೇಳೆ ಪಕ್ಷ ಸೇರ್ಪಡೆ ಹಾಗೂ ಆಮ್‌ ಆದ್ಮಿ ಪಾರ್ಟಿ ಪರ ಒಲವು ಇರುವ ಮಂದಿಯ ಭೇಟಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಆಸಕ್ತರು ನೋಂದಣಿ ಮಾಡುವ ಬಗ್ಗೆ ಚರ್ಚೆ ನಡೆದು ಆನ್‌ ಲಿಂಕ್‌ ಉದ್ಘಾಟಿಸಲಾಯಿತು.‌  ಆನ್‌ ಲೈನ್‌ ಲಿಂಕ್  ( ಬಿಡುಗಡೆಯಾದ ಸದಸ್ಯತ್ವ ಲಿಂಕ್‌ ಇಲ್ಲಿದೆ )

ಈ ಸಂದರ್ಭ ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌, ಪ್ರಮುಖರಾದ ದಿವಾಕರ ಸನಿಲ್‌, ಶಾಂತಲಾ ದಾಮ್ಲೆ, ವಿಜಯ ಶರ್ಮ, ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮೊದಲಾದವರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

11 minutes ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

18 minutes ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

25 minutes ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

11 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

19 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago