ಆಮ್ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲಿಗರು ವ್ಯಕ್ತವಾಗಿದ್ದಾರೆ . ಇದರಲ್ಲಿ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ,ಮೂಡಬಿದ್ರೆ ಹಾಗೂ ಸುಳ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಎಎಪಿ ತಿಳಿಸಿದೆ.
ಆಮ್ ಆದ್ಮಿ ಪಾರ್ಟಿಯ ವಲಯ ಸಂಯೋಜಕರಾದ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ಮತ್ತು ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ ಹಾಗೂ ದ ಕ ಜಿಲ್ಲಾ ಅಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆದ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳಿಂದ ಬೇಸತ್ತ ಜನರು ಆಮ್ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಹೇಳಿದ್ದಾರೆ. http://bdc.pe.hu/aap/
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5 ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖ, ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ. ಸದಸ್ಯತ್ವದ ಲಿಂಕ್ http://bdc.pe.hu/aap/
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..