ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆ ? |

February 28, 2023
8:10 PM

ಮಾಜಿ ಪೊಲೀಸ್ ಕಮಿಷನರ್ , ಆಮ್‌ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್‌ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಆಮ್‌ ಆದ್ಮಿ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿದ್ದ ಭಾಸ್ಕರ್‌ ರಾವ್‌ ಅವರು ರಾಜಕೀಯ ಕ್ಷೇತ್ರದ ಕಡೆಗೆ ಆಸಕ್ತರಾಗಿ ದೆಹಲಿ ಮುಖ್ಯಮಂತ್ರಿ  ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಭಾಸ್ಕರ್ ರಾವ್ ಅವರು ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯಿಂದ  ಬಸವನಗುಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭಾಸ್ಕರ್ ರಾವ್​ ಅವರು ಸಿದ್ಧತೆ ನಡೆಸಿದ್ದರು.

ಮಂಗಳವಾರ ಭಾಸ್ಕರ್‌ ರಾವ್‌ ಅವರು ಕಂದಾಯ ಸಚಿವ ಆರ್ ಅಶೋಕ್‌ ಅವರನ್ನು ಭೇಟಿ ಮಾಡಿದ್ದರು. ಮಾ.1 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಭಾಸ್ಕರ್ ರಾವ್ ಅವರು 1990 ರ ಬ್ಯಾಚ್‌ನ ಭಾರತೀಯ ಪೊಲೀಸ್ ಅಧಿಕಾರಿಯಾಗಿದ್ದು, 2 ಆಗಸ್ಟ್ 2019 ರಿಂದ 1 ಆಗಸ್ಟ್ 2020 ರವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror