ಮಾಜಿ ಪೊಲೀಸ್ ಕಮಿಷನರ್ , ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಆಮ್ ಆದ್ಮಿ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿದ್ದ ಭಾಸ್ಕರ್ ರಾವ್ ಅವರು ರಾಜಕೀಯ ಕ್ಷೇತ್ರದ ಕಡೆಗೆ ಆಸಕ್ತರಾಗಿ ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಭಾಸ್ಕರ್ ರಾವ್ ಅವರು ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭಾಸ್ಕರ್ ರಾವ್ ಅವರು ಸಿದ್ಧತೆ ನಡೆಸಿದ್ದರು.
ಮಂಗಳವಾರ ಭಾಸ್ಕರ್ ರಾವ್ ಅವರು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದರು. ಮಾ.1 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಭಾಸ್ಕರ್ ರಾವ್ ಅವರು 1990 ರ ಬ್ಯಾಚ್‌ನ ಭಾರತೀಯ ಪೊಲೀಸ್ ಅಧಿಕಾರಿಯಾಗಿದ್ದು, 2 ಆಗಸ್ಟ್ 2019 ರಿಂದ 1 ಆಗಸ್ಟ್ 2020 ರವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…