ಸಂತೋಷ್ ಕಾಮತ್
ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ, 4750 ಕೋಟಿ ರೂಪಾಯಿ ಖರ್ಚಾದರೂ ನಗರದ ರಸ್ತೆ ಮಾತ್ರಾ ಏಕೆ ಹದಗೆಟ್ಟ ಸ್ಥಿತಿಯಲ್ಲಿದೆ ಎಂದು ಪ್ರಶ್ನಿಸಿದೆ.
ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ನೀಡಿದ್ದು, 4750 ಕೋಟಿ ರೂ. ಮೊತ್ತದ ಕಾಮಗಾರಿ ಆಗಿದ್ದರೆ ನಗರದ ಪ್ರತಿಯೊಬ್ಬನಿಗೂ ಅದು ಅನುಭವಕ್ಕೆ ಬರುತಿತ್ತು. ಹಾಗೇನು ಆಗಿಲ್ಲ. ಇಷ್ಟೊಂದು ಮೊತ್ತದ ಕಾಮಗಾರಿಗಳ ವಿವರವನ್ನು ಶಾಸಕರು ಜನರ ಮುಂದಿಡಲಿ. ಜನರಿಗೆ ಇವರ ಅಭಿವೃದ್ಧಿ ಕೆಲಸದ ಸತ್ಯಾಸತ್ಯತೆ ಗೊತ್ತಾಗಲಿ ಎಂದವರು ಹೇಳಿದ್ದಾರೆ. ಕೆಲವು ವೃತ್ತಗಳನ್ನು ಮರುವಿನ್ಯಾಸ ಮಾಡಿ ಮರುನಾಮಕರಣ ಮಾಡಿದ್ದೇ ಹೊರತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗಿಲ್ಲ. ನಗರದೊಳಗೆ ಹಲವು ರಸ್ತೆಗಳನ್ನು ದುರಸ್ಥಿ ಮಾಡಿಲ್ಲ. ಘನತ್ಯಾಜ್ಯ ವಿಲೇವಾರಿ ವೈಫಲ್ಯಕ್ಕೆ ಹೈಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಒಳ ಚರಂಡಿ ಕೊಳಚೆ ನೀರನ್ನು ರಾಜ ಕಾಲುವೆಗಳಲ್ಲಿ ಬಿಡಲಾಗುತ್ತಿದೆ. ನಗರದ ಬಹುತೇಕ ಕಡೆ ಯುಜಿಡಿ ಸೌಲಭ್ಯವೇ ಇಲ್ಲ. ಇವುಗಳ ಬಗ್ಗೆ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಸಂತೋಷ್ ಕಾಮತ್ ಪ್ರಶ್ನಿಸಿದ್ದಾರೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…