ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಮೋಜು | ಆಮ್‌ ಆದ್ಮಿ ಪಾರ್ಟಿ ಗಂಭೀರ ಆರೋಪ |

July 25, 2022
8:44 PM

ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರು ಸಹಕಾರಿ ಸಂಘದ ಆಡಳಿತವು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸದ ಮೋಜಿನ ಪ್ರವಾಸ  ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಕಡಬ ತಾಲೂಕಿನ ಆಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು‌ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸ ಹೋಗಿದ್ದಾರೆ. ಇದು ಸರಿಯಲ್ಲ. ಸಹಕಾರಿ ಸಂಘದ ಸದಸ್ಯರ ಹಣದಲ್ಲಿ ಇಂತಹ ಪ್ರವಾಸ ಸರಿಯಲ್ಲ. ಪ್ರವಾಸದಲ್ಲಿ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ‌ ಕುಟುಂಬ‌ಸದ ಸದಸ್ಯರನ್ನೂ ಕರೆದೊಯ್ಯಲಾಗಿದೆ.  ಪ್ರವಾಸದ‌ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು‌ ಪ್ರವಾಸಿ ತಾಣಗಳನ್ನು ಮಾತ್ರ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

ಸಹಕಾರಿ ಸಂಘದ ವತಿಯಿಂದ ಕೃಷಿ ಕ್ಷೇತ್ರಗಳಿಗೆ, ಕೃಷಿಗೆ ಸಂಬಂಧಿತ ಚಟುವಟಿಕೆಗಳಿಗೆ, ಕೃಷಿಕರಿಗೆ, ಆ ಸಹಕಾರಿ ಸಂಘದ ಸದಸ್ಯರಿಗೆ ಅನುಕೂಲವಾಗುವ ಪ್ರವಾಸ ನಡೆಸಬೇಕೇ ಹೊರತು ಮೋಜಿನ ಪ್ರವಾಸ ಸಲ್ಲದು. ಸಹಕಾರಿ ಸಂಘದಲ್ಲಿ ರೈತರ ಹಣ ದುರುಪಯೋಗವಾಗುವುದು ಸಹಿಸಲಾಗದು ಎಂದು ಆಲಂಕಾರು ನಿವಾಸಿ , ಆಮ್‌ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ  ಜನಾರ್ಧನ ಬಂಗೇರ ಆರೋಪಿಸಿದರು. ಅನೇಕ ಸಹಕಾರಿ ಸಂಘಗಳು ಯಶಸ್ವಿಯಾಗಿ ಮುನ್ನಡೆದ ಉದಾಹರಣೆ ಇದೆ. ಅಂತಹ ಸಹಕಾರಿ ಸಂಘಗಳ ಅಧ್ಯಯನದ ಬಳಿಕ ಅನುಷ್ಟಾನಕ್ಕೆ ಪ್ರಯತ್ನಿಸಬೇಕು ಎಂದು ಜನಾರ್ಧನ ಬಂಗೇರ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ತಾಲೂಕು ಅಧ್ಯಕ್ಷ ಡಾ.ವಿಷು ಕುಮಾರ್‌ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror