ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಶನಿವಾರ ಪುತ್ತೂರಿನ ಅಶ್ವಿನಿ ಹೋಟೆಲ್ ದರ್ಬೆ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಶ್ರೀಧರ ಶೆಟ್ಟಿ ಬೈಲುಗುತ್ತು, ಸಾಮಾಜಿಕ ಹೋರಾಟಗಾರ ಸುದರ್ಶನ್ ಮುರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಅವರನ್ನು ಎಎಪಿ ಪುತ್ತೂರು ಕ್ಷೇತ್ರದ ವಿಧಾನಸಭಾ ಅಧ್ಯಕ್ಷರಾದ ಡಾ. ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರಷೋತ್ತಮ ಗೌಡ ಕೊಲ್ಪೆ, ಸಂಘಟನಾ ಕಾರ್ಯದರ್ಶಿ ಜನಾರ್ದನ ಬಂಗೇರ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಶೀದ್ ಜಟ್ಟಿಪಳ್ಳ ಪಕ್ಷದ ಶಾಲು ಹಾಕಿ ಆದರಪುರ್ವಕವಾಗಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಮುಂದಿನ ದಿನಗಳಲ್ಲಿ ಬೃಹತ್ ಸಮಾವೇಶವನ್ನು ನಡೆಸುವುದಾಗಿ ತೀರ್ಮಾನಿಸಲಾಯಿತು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…