ಸುದ್ದಿಗಳು

ಸುಳ್ಯದಲ್ಲಿ ಆಮ್‌ ಆದ್ಮಿ ಪಕ್ಷದಿಂದ ಪ್ರಚಾರ ಆರಂಭ | ಸುಳ್ಯ ಶಾಸಕರ ವಾರ್ಡಿನಿಂದಲೇ ಪ್ರಚಾರ ಆರಂಭಿಸಿದ ಎಎಪಿ | ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿ ನಡಿಗೆ |

Share

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್ ಹಾಗೂ ಪಕ್ಷದ ಮುಖಂಡರು ಮಂಗಳವಾರ ಗುರುಪ್ರಸಾದ್ ಮೇರ್ಕಜೆ ನೇತೃತ್ವದಲ್ಲಿ, ಅಮರಮೂಡ್ನೂರು ಗ್ರಾಮದ  ಮುಂಡಕಜೆ ವಾರ್ಡ್ ನಿಂದ ಪ್ರಚಾರ ಅಭಿಯಾನ ಹಾಗೂ ಅಧ್ಯಯನ ಪ್ರವಾಸ ಆರಂಭಿಸಿದೆ. 

Advertisement

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿಕೊಂಡು ಆಮ್‌ ಆದ್ಮಿ ಪಕ್ಷವು ಹೆಜ್ಜೆ ಹಾಕಿದೆ. ಸುಳ್ಯದ ಗ್ರಾಮೀಣ ಭಾಗಗಳು ಹಾಗೂ ನಗರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ಹಾಕಿಕೊಂಡಿದೆ. ಇದರ ಜೊತೆಗೆ ಗ್ರಾಮೀಣ ಭಾಗದ ಸಂಪರ್ಕ ನಡೆಸಿ ಸಮಸ್ಯೆಗಳ ಬಗ್ಗೆ ಅಧ್ಯಯನ ಹಾಗೂ ಪರಿಹಾರದ ಬಗ್ಗೆ ಗ್ರಾಮಸ್ಥರ ಜೊತೆಗೆ ಸಭೆ ನಡೆಸುತ್ತಿದೆ. ಇದರ ಮೊದಲ ಭಾಗವಾಗಿ ಸುಳ್ಯ ಶಾಸಕರ ವಾರ್ಡ್‌ ನಿಂದಲೇ ಸಭೆ ಆರಂಭಿಸಿದೆ. ಪರಿಶಿಷ್ಟ ವರ್ಗದ ನಿವಾಸಿಗಳ ಮುಂಡಕಜೆ ವಾರ್ಡಿನಲ್ಲಿ ಎರಡು ಮೂರು ದಶಕದಿಂದ ರಸ್ತೆಯ ನಿರ್ಲಕ್ಷ್ಯ, ಮನೆ ನಿವೇಶನ ದಾಖಲಾತಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಇತ್ಯಾದಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಅಲ್ಲಿನ ನಾಗರಿಕರೊಂದಿಗೆ ವಿಸ್ತಾರವಾದ ವಿಚಾರ ವಿಮರ್ಶೆ ನಡೆಸಿತು.

ಸ್ಥಳೀಯ ‌ನಾಯಕರಾದ ಸುರೇಶ್ ಮುಂಡಕಜೆ ನೇತೃತ್ವದಲ್ಲಿ ಅನೇಕರು ಪಕ್ಷ ಸೇರ್ಪಡೆಗೊಂಡು, ಬದಲಾವಣೆಯ ಜನಸಾಮಾನ್ಯರ ಹೊಸ ರಾಜಕಾರಣವನ್ನು ಭದ್ರಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಪಕ್ಷದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡಿದರು. ಎಎಪಿ ಮುಖಂಡರಾದ ರಶೀದ್ ಜಟ್ಟಿಪಳ್ಳ ಸ್ವಾಗತಿಸಿದರು. ‌ ಈ ಸಂದರ್ಭದಲ್ಲಿ ಗ್ರಾಮ ಸಂಪರ್ಕ ಅಭಿಯಾನದ ಸಂಯೋಜಕ ಗಣೇಶ್ ಪ್ರಸಾದ್ ಕಂದಡ್ಕ, ರಾಮಕೃಷ್ಣ ಬೀರಮಂಗಲ, ಯಶವಂತ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

46 minutes ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

17 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

17 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

24 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

1 day ago