ಸುಳ್ಯ ವಿಧಾನಸಭಾ ಕ್ಷೇತ್ರ | ನೆಲ್ಯಾಡಿಯಲ್ಲಿ ಐವರು ಮಾಜಿ ಗ್ರಾಪಂ ಸದಸ್ಯರು ಎಎಪಿಗೆ ಸೇರ್ಪಡೆ |

February 11, 2023
8:46 PM

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಾರ್ಟಿ ಪ್ರಚಾರ ಕಾರ್ಯ ನಡೆಸುತ್ತಿದೆ. ಈ ಸಂದರ್ಭ  ನೆಲ್ಯಾಡಿ ಪ್ರದೇಶದ ಐವರು ಮಾಜಿ ಗ್ರಾಪಂ ಸದಸ್ಯರು ಎಎಪಿಗೆ ಸೇರ್ಪಡೆಯಾದರು. 

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಅಭಿಯಾನವು ನೆಲ್ಯಾಡಿ ಬ್ಲಾಕ್ ಮುಖಂಡ ಪ್ರತಾಪ್ ಚಂದ್ರ ರೈ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಐವರು ಮಾಜಿ ಗ್ರಾಮ ಪಂಚಾಯತ್  ಸದಸ್ಯರು ಸೇರಿದಂತೆ ಹಲವರು  ಪ್ರಮುಖರ ಭೇಟಿ ಹಾಗೂ ಸೇರ್ಪಡೆ ನಡೆಸಿದರು.ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಎಎಪಿ ಪ್ರಚಾರ ಕಾರ್ಯ ನಡೆಸುತ್ತಿದ್ದು ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಗ್ರಾಮೀಣ ರಸ್ತೆ ಸೇರಿದಂತೆ ಅಭಿವೃದ್ಧಿ ಪರವಾದ ಯೋಜನೆಗಳೊಂದಿಗೆ ಪ್ರಚಾರ ಕಾರ್ಯ ನಡೆಸುತ್ತಿದೆ.

ಈ ಸಂದರ್ಭ ಸುಳ್ಯ ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್‌, ಎಎಪಿ ಜಿಲ್ಲಾ ಅಧ್ಯಕ್ಷ ಅಶೋಕ್‌ ಎಡಮಲೆ, ಆನಂದ ರಾಮಕುಂಜ, ಕಲಂದರ್‌ ಎಲಿಮಲೆ, ಸಂಶುದ್ದಿನ್ ಕೆ ಎಂ‌  ಮೊದಲಾದವರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror