ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಪ್ರಚಾರ ಕಾರ್ಯ ನಡೆಸುತ್ತಿದೆ. ಈ ಸಂದರ್ಭ ನೆಲ್ಯಾಡಿ ಪ್ರದೇಶದ ಐವರು ಮಾಜಿ ಗ್ರಾಪಂ ಸದಸ್ಯರು ಎಎಪಿಗೆ ಸೇರ್ಪಡೆಯಾದರು.
ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಅಭಿಯಾನವು ನೆಲ್ಯಾಡಿ ಬ್ಲಾಕ್ ಮುಖಂಡ ಪ್ರತಾಪ್ ಚಂದ್ರ ರೈ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಐವರು ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಪ್ರಮುಖರ ಭೇಟಿ ಹಾಗೂ ಸೇರ್ಪಡೆ ನಡೆಸಿದರು.ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಎಎಪಿ ಪ್ರಚಾರ ಕಾರ್ಯ ನಡೆಸುತ್ತಿದ್ದು ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಗ್ರಾಮೀಣ ರಸ್ತೆ ಸೇರಿದಂತೆ ಅಭಿವೃದ್ಧಿ ಪರವಾದ ಯೋಜನೆಗಳೊಂದಿಗೆ ಪ್ರಚಾರ ಕಾರ್ಯ ನಡೆಸುತ್ತಿದೆ.
ಈ ಸಂದರ್ಭ ಸುಳ್ಯ ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ಎಎಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಎಡಮಲೆ, ಆನಂದ ರಾಮಕುಂಜ, ಕಲಂದರ್ ಎಲಿಮಲೆ, ಸಂಶುದ್ದಿನ್ ಕೆ ಎಂ ಮೊದಲಾದವರಿದ್ದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…