ಆಮ್ ಆದ್ಮಿ ಪಾರ್ಟಿ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದೆ : ಅಶೋಕ್ ಎಡಮಲೆ

May 6, 2023
7:12 PM

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಕ್ಷ ಇತ್ತೀಚೆಗೆ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದ್ದು ಜನರು ಆಮ್ ಆದ್ಮಿ ಪಕ್ಷದ ಅಭಿವೃದ್ದಿಪರ ಚಿಂತನೆಯ ಆಡಳಿತವನ್ನು ಮೆಚ್ಚಿಕೊಂಡಿದ್ದು, ರಾಷ್ಟ್ರೀಯ ಪಕ್ಷಗಳ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ, ಈ ಬಾರಿಯ ಚುನಾವಣೆಯಲ್ಲಿ ಗೆದ್ದರೂ ಸೋತರೂ ಸದಾ ಜನ ಸಾಮಾನ್ಯರೊಂದಿಗೆ ಬೆರೆತು ಜನರ ಎಲ್ಲಾತರದ ಕಷ್ಟಗಳಿಗೆ ಆಮ್ ಆದ್ಮಿ ಪಕ್ಷ ಸ್ಪಂದಿಸಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು ಅಭಿವೃದ್ದಿಯಲ್ಲಿ ಮುನ್ನುಗ್ಗುತ್ತಿರುವ ದೆಹಲಿ ಮತ್ತು ಪಂಜಾಬ್ ಇದಕ್ಕೆ ಮಾದರಿಯಾಗಿದ್ದು, ಕರ್ನಾಟಕದಲ್ಲೂ ರಾಜ್ಯದ ಅಭಿವೃದ್ದಿ , ಜನಸಾಮಾನ್ಯರಿಗೆ ಸುಲಲಿತ ಸರ್ವಿಸ್ ಗಳಿಗೆ ಆಮ್ ಆದ್ಮಿ ಪಕ್ಷ ಅದಿಕಾರಕ್ಕೆ ಬರುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಸುಳ್ಯದ ಕೃಷಿಕರನ್ನು ಬಾಧಿಸುತ್ತಿರುವ ಅಡಿಕೆ ಎಲೆ ಹಳದಿ
ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಹಾಗೂ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕಾಮಗಾರಿ
ಮಾಡಿಸುವ ನಿಟ್ಟಿನಲ್ಲಿ ಎ.ಎ.ಪಿ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದರೆ ಮೊದಲ ಕೆಲಸವಾಗಿ ಇದನ್ನೇ ಮಾಡುತ್ತೇವೆ. ಇದಕ್ಕಾಗಿ ಯಾವ ಹೋರಾಟಕ್ಕೂ ನಾವು ಬದ್ಧರಾಗಿದ್ದು ಆ ಕೆಲಸವನ್ನು ಮಾಡಿಯೇ ಮಾಡುತ್ತೇವೆ ಎಎಪಿ ಕರ್ನಾಟಕದಲ್ಲಿ ಕೆಲವು ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ಹಾಕಿಕೊಂಡಿದ್ದು ಅಧಿಕಾರಕ್ಕೆ ಬಂದ ತಕ್ಷಣ ಹಂತ ಹಂತವಾಗಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಮಾತನಾಡಿ ನಾನು ಗ್ರಾಮೀಣ ಭಾಗದಲ್ಲಿ ಸುತ್ತಿದ್ದೇನೆ. ನನ್ನ ತಂದೆಯವರು ಶಾಸಕರಾಗಿದ್ದ ಸಂದರ್ಭದಲ್ಲಿ ಆದ ಕೆಲಸವನ್ನು ಜನರು ಈಗಲೂ ನೆನಪಿಸುತ್ತಿದ್ದಾರೆ. ಆದರೆ ಆ ಬಳಿಕದಲ್ಲಿ ಏನು ಕೆಲಸಗಳಾಗಿಲ್ಲ. ಈಗಲೂ ಕೆಲವು ಮನೆಗಳು ಸೀರೆಯ ಗೋಡೆ ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ . ಕೆಲವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ರಸ್ತೆ ಸೇತುವೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಸುಳ್ಯ ಮೀಸಲು ಕ್ಷೇತ್ರ. ಹಾಗಾಗಿ ಅಭಿವೃದ್ದಿಗೆ ಇಲ್ಲಿಗೆ ಹೆಚ್ಚು ಅನುದಾನ ಬರಬೇಕು. ಆದರೆ ಇಲ್ಲಿಯವರು ಅನುದಾನ ತರುವಲ್ಲಿ ಪ್ರಯತ್ನಿಸಲೇ ಇಲ್ಲ ಚುನಾವಣಾ ಪ್ರಚಾರದಲ್ಲಿ ತೊಡಗುತ್ತಾ ತೊಡಗುತ್ತಾ ಇಲ್ಲಿಯ ಅಭಿವೃದ್ದಿಗಾಗಿ, ಜನರ ಕಷ್ಟಗಳಿಗೆ ಸ್ಪಂದನೆಗಾಗಿ ನಿರಂತರ ಜನ ಸಂಪರ್ಕದ ಕಾರ್ಯದಲ್ಲಿ ತೊಡಗಲು ಆಸಕ್ತಿ ಬೆಳೆದಿದೆ ಎಂದು ಹೇಳಿದರು.

ಚುನಾವಣಾ ಪ್ರಚಾರ ಉಸ್ತುವಾರಿ ಖಲಂದರ್ ಎಲಿಮಲೆ ಮಾತನಾಡಿ,ಎಲ್ಲಾ ಕಾನೂನು ಬದ್ದವಾಗಿ ಪ್ರಚಾರ ಕಾರ್ಯ ನಡೆಯುತ್ತಿದೆ ಈ ಬಾರಿ ಸುಳ್ಯದಲ್ಲಿ ಜನರು ಎಎಪಿಯನ್ನು ಮೆಚ್ಚಿಕೊಂಡಿದ್ದಾರೆ. ಪ್ರಚಾರದ ವೇಳೆ ಉತ್ತಮ ಪ್ರತಿಕ್ರಿಯೆ ಇದೆ . ಜನರಿಗೆ ಬೇರೆ ಪಕ್ಷದ ಜೊತೆ ಗುರುತಿಸಿಕೊಳ್ಳಲು ಭಯಪಡುವ ವಾತಾವರಣ ರಾಷ್ಟ್ರೀಯ ಪಕ್ಷಗಳು ಮಾಡಿವೆ, ಸದ್ಯದಲ್ಲಿಯೇ ಸುಳ್ಯದ ಚಿತ್ರಣ ಬದಲಾಗಿ ಜನರ ಆಪ್ ಪಕ್ಷವನ್ನು ಒಪ್ಪಿಕೊಳ್ಳಲಿದ್ದಾರೆ ,ಮೇ.8 ರಂದು ತಾಲೂಕಿನ ಸಂಪಾಜೆಯಿಂದ ಆರಂಭಗೊಂಡು ನಗರ ವ್ಯಾಪ್ತಿ, ಹಾಗೂ ತಾಲೂಕಿನಾದ್ಯಂತ ಚುನಾವಣಾ ಪ್ರಚಾರ ಮೆರವಣಿಗೆ ನಡೆಯಲಿದೆ ನೂರಾರು ಕಾರ್ಯಕರ್ತರು ಪಕ್ಷದ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group