ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 1 ಮತ್ತು 2 ರಂದು ಎರಡು ದಿನಗಳ ಕಾಲ ದಾವಣಗೆರೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ತೋಟಗಾರಿಕಾ ವಿಜ್ಞಾನಿ ಡಾ.ದೇವರಾಜ್ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ಸಸ್ಯ ಸಂತೆ, ವಸ್ತು ಪ್ರದರ್ಶನ ಮತ್ತು ಸಾವಯದ ಪರಿಕರಗಳ” ಮಾರಾಟ ಮೇಳದಲ್ಲಿ ಉತ್ತಮ ಗುಣಮಟ್ಟದ 50 ಕ್ಕೂ ಹೆಚ್ಚು ಹಣ್ಣಿನ ಗಿಡಗಳ ಮಾರಾಟ, ದೇಸಿ ಬೀಜಗಳ ಪ್ರದರ್ಶನ ಮತ್ತು ಮಾರಾಟ, ಕೈತೋಟ ಮತ್ತು ತಾರಸಿ ತೋಟಗಳಿಗೆ ಬೇಕಾಗುವ ಸಲಕರಣೆಗಳು, ಸಾವಯವ ಪರಿಕರ ಗೊಬ್ಬರಗಳ ಮಾರಾಟ, ಸಿರಿಧಾನ್ಯಗಳ ಉಪ ಉತ್ಪನ್ನಗಳು, ಸಾವಯವ ಆಹಾರ ಪದಾರ್ಥಗಳ ಮಾರಾಟ ನಡೆಯಲಿದೆ ಎಂದರು.
ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ವತಿಯಿಂದ ಬೆಂಗಳೂರಿನ ಐಸಿಎಂಆರ್-ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ವಿ. ವೆಂಕಟಸುಬ್ರಮಣ್ಯ ಸಾವಯವ ಪರಿಕರಗಳ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಎಂದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…