ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.
Advertisement
ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement