ಚುನಾವಣೆಯ ಪ್ರಮುಖ ಚರ್ಚಾ ವಿಷಯ ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿ : 370 ವಿಧಿ ರದ್ದು ಪಡಿಸಿದ್ದಕ್ಕೆ ಅಂಬೇಡ್ಕರ್ ಆತ್ಮ ನನ್ನನ್ನು ಆಶೀರ್ವದಿಸುತ್ತಿರಬಹುದು: ಮೋದಿ

April 12, 2024
8:26 PM

Article 370 ಅನ್ನು ಮೋದಿ ಸರ್ಕಾರ(Modi Govt) ರದ್ದು ಪಡಿಸಿ ಈಗಾಗಲೇ ವರ್ಷಗಳೇ ಕಳೆದಿದೆ. ಆದರೆ ಈ ಬಾರಿಯ ಲೋಕಸಭೆ ಚುನಾವಣೆಗೆ(Lok sabha Election) ಪ್ರಮುಖ ವಿಷಯವಾಗಿ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರ(BJP Govt) ರದ್ದುಪಡಿಸಿದ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕೆ ಡಾ.ಬಿ.ಆರ್ ಅಂಬೇಡ್ಕರ್ (Dr.BR Ambedkar) ಅವರ ಆತ್ಮ ನನ್ನನ್ನು ಆಶೀರ್ವದಿಸುತ್ತಿರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

Advertisement
ನಾಗ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತಾಡಿದ ಅವರು, ಮೂರನೇ ಬಾರಿಗೆ ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕಲಿದೆ ಎಂಬ ಪ್ರತಿಪಕ್ಷಗಳ ಟೀಕೆಗಳನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷಗಳು ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಹೊಂದಿದ್ದು, 370ನೇ ವಿಧಿಯನ್ನು (Article 370) ರದ್ದು ಮಾಡಿದಾಗ ಅದಕ್ಕೆ ವಿರೋಧಿಸಿದವು. ಆರ್ಟಿಕಲ್ 370 ರದ್ದಾದ ನಂತರ ಅಂಬೇಡ್ಕರ್ ಅವರ ಆತ್ಮವು ನನ್ನನ್ನು ಆಶೀರ್ವದಿಸುತ್ತಿರಬಹುದು ಎಂದಿದ್ದಾರೆ.

ಬಿಜೆಪಿ (BJP) ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವವಾಗಿದೆ. ಈಗ ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನವನ್ನು ರದ್ದುಪಡಿಸಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಹೇಳುವ ಮೂಲಕ ಪ್ರತಿಪಕ್ಷಗಳು ಜನರನ್ನು ಮೂರ್ಖರನ್ನಾಗಿಸುತ್ತಿವೆ. ಕಾಂಗ್ರೆಸ್ (Congress) ತುರ್ತು ಪರಿಸ್ಥಿತಿಯನ್ನು ಹೇರಿ ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸಿತ್ತು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬರಲಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರು ಈಗ ಸಾಂವಿಧಾನಿಕ ಹಕ್ಕುಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಅವರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಡೆಗಣಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ನಿಮ್ಮ ಕನಸು ನನ್ನ ಸಂಕಲ್ಪವಾಗಿದೆ. ನನ್ನ ಪ್ರತಿಯೊಂದು ಕ್ಷಣವೂ ನಿಮ್ಮ ಕಲ್ಯಾಣ ಮತ್ತು ದೇಶದ ಪ್ರಗತಿಗಾಗಿ ಮೀಸಲಿಡಲಾಗಿದೆ ಎಂದಿದ್ದಾರೆ.

ಅಂಬೇಡ್ಕರ್ ಏನು ಹೇಳಿದ್ದರು?: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಅಂಬೇಡ್ಕರ್ ವಿರೋಧಿಸಿದ್ದರು. ವಿಶೇಷ ಸ್ಥಾನಮಾನ ನೀಡಿದರೆ ಭಾರತದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಆಗುತ್ತದೆ ಎಂದು ಹೇಳಿದ್ದರು. ಆದರೆ ಜವಾಹಾರಲಾಲ್ ನೆಹರು ಅವರು ವಿಶೇಷ ಸ್ಥಾನ ಪರ ಮಾತನಾಡಿದ್ದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group