ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ವಿಷಯ | ಕೇಂದ್ರ ಸರ್ಕಾರದ ಕ್ರಮ ಸರಿಯಿದೆ – ಸುಪ್ರೀಂಕೋರ್ಟ್‌ನಿಂದ ಐತಿಹಾಸಿಕ ತೀರ್ಪು

December 11, 2023
3:02 PM

ಆರ್ಟಿಕಲ್‌ 370ನ್ನು ಕೇಂದ್ರ ಸರ್ಕಾರ ರದ್ದುಗೊಳಿದ್ದು ಅನೇಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದು ಸರಿಯಾದ ಕ್ರಮವಲ್ಲ. ಇದನ್ನು ಮುಂದುವರೆಸಬೇಕು ಎಂಬ ಕೂಗು ಕೇಳಿ ಬಂದಿತ್ತು. ಹಾಗೆ ಅನೇಕರು ಇದನ್ನು ರದ್ದುಪಡಿಸುವಂತೆ ಕೋರಿ ಸುಪ್ರೀಮ್‌ ಕೋರ್ಟ್‌ ಮೆಟ್ಟಿಲು ಏರಿದ್ದರು. ಇದೀಗ ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು (Jammu and Kashmir Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ಕ್ರಮ ಸರಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದೆ. 2019ರ ಆಗಸ್ಟ್‌ 6 ರಂದು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ(Central govt) ಲಡಾಖ್(Ladakh), ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ(Union Territory) ಮಾಡಿತ್ತು.

Advertisement

ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ತೀರ್ಪುನಲ್ಲಿರುವ ಪ್ರಮುಖ ಅಂಶಗಳು :
ಆರ್ಟಿಕಲ್ 356 (ರಾಷ್ಟ್ರಪತಿ ಆಳ್ವಿಕೆ ಹೇರಿಕೆ) ಅಡಿಯಲ್ಲಿ ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಆರ್ಟಿಕಲ್ 356ರ ಅಡಿಯಲ್ಲಿ ಘೋಷಣೆ ಜಾರಿ ಮಾಡುವ ಮೊದಲು ಕೇಂದ್ರವು ಲೆಕ್ಕವಿಲ್ಲದಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಒಂದು ವೇಳೆ ಅ ನಿರ್ಧಾರವನ್ನು ಪ್ರಶ್ನಿಸಿ ಅನುಮತಿ ನೀಡಿದರೆ ಅದು ಅವ್ಯವಸ್ಥೆಗೆ ಕಾರಣವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತಲೂ ಭಾರತದ ಸಂವಿಧಾನ ಮೇಲಿದೆ. 370ನೇ ವಿಧಿಯ ಅಡಿ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಇದು ಶಾಶ್ವತವಲ್ಲ. ಅಂದಿನ ಪರಿಸ್ಥಿತಿಯನ್ನು ಪರಿಗಣಿಸಿ ಈ ವಿಶೇಷ ಸ್ಥಾನ ನೀಡಲಾಗಿದೆ. ಜಮ್ಮು ಕಾಶ್ಮೀರಕ್ಕೆ ಭಾರತದ ಸಂವಿಧಾನದ ಅಡಿಯಲ್ಲೇ ವಿಶೇಷ ಸ್ಥಾನ ಮಾನ ನೀಡಿದ್ದರಿಂದ ಇದು ಭಾರತದ ಅವಿಭಾಜ್ಯ ಅಂಗ. 356 ನೇ ವಿಧಿಯಡಿ ಘೋಷಣೆಯ ಸಮಯದಲ್ಲಿ ಕೇಂದ್ರವು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದ ಒಪ್ಪಲು ಸಾಧ್ಯವಿಲ್ಲ. ರಾಷ್ಟ್ರಪತಿ ಆಳ್ವಿಕೆಯ ಸಮಯದದಲ್ಲಿ ಕೇಂದ್ರವು  ರಾಜ್ಯದ ಶಾಸಕಾಂಗದ ಅಧಿಕಾರವನ್ನು ಚಲಾಯಿಸಬಹುದು.

ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯು ಅಸ್ತಿತ್ವದಲ್ಲಿಲ್ಲದಿರುವಾಗ, 370 ನೇ ವಿಧಿಯ ವಿಶೇಷ ಷರತ್ತು ಅಸ್ತಿತ್ವದಲ್ಲಿರುವುದಿಲ್ಲ. ಸಂವಿಧಾನ ರಚನಾ ಸಭೆಯು ಜಮ್ಮು ಮತ್ತು ಕಾಶ್ಮೀರವನ್ನು ಎಂದಿಗೂ ಶಾಶ್ವತ ಸಂಸ್ಥೆಯಾಗಲು ಉದ್ದೇಶಿಸಿರಲಿಲ್ಲ. ಜಮ್ಮು ಕಾಶ್ಮೀರ ಭಾರತದೊಂದಿಗೆ ವಿಲೀನಗೊಂಡಾಗ ತನ್ನ ಸಂಪೂರ್ಣ ಸಾರ್ವಭೌಮತ್ವವನ್ನು ಒಪ್ಪಿತ್ತು. ಭಾರತಕ್ಕೆ ಸೇರಿದ ನಂತರ ಅದರ ಪ್ರತ್ಯೇಕ ಸಾರ್ವಭೌಮತ್ವ ಉಳಿಯುವುದಿಲ್ಲ. ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಲಾದ ನಿರ್ಧಾರ ಸರಿಯಾಗಿದೆ.  ಕೇಂದ್ರ ಚುನಾವಣಾ ಆಯೋಗ 2024ರ ಸೆಪ್ಟೆಂಬರ್‌ 30ರ ಒಳಗಡೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಸಬೇಕು.

The Supreme Court has given a historic verdict by saying that the central government's action in revoking the special status granted to Jammu and Kashmir was correct. On August 6, 2019, the central government canceled the special status and made Ladakh, Jammu and Kashmir a Union Territory.

– ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |
April 27, 2025
1:12 PM
by: ಸಾಯಿಶೇಖರ್ ಕರಿಕಳ
ಬದುಕು ಪುರಾಣ | ಅದು ‘ಎಚ್ಚರ’ದ ರೇಖೆ!
April 27, 2025
11:29 AM
by: ನಾ.ಕಾರಂತ ಪೆರಾಜೆ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ
April 27, 2025
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group