ಭಾರತ ದೇಶದಲ್ಲಿ ಸುಮಾರು ಶೇಕಡಾ 70 ರಷ್ಟು ಜನರು ಕೃಷಿಯನ್ನು ಅವಲಂಭಿಸಿದ್ದಾರೆ. ಈ ಜಗತ್ತಿನಲ್ಲಿ ಸಿರಿದಾನ್ಯಗಳ ಬಳಕೆ ಹೆಚ್ಚಾಗಬೇಕು ಮತ್ತು ಇಂದಿನ ಮಕ್ಕಳು ಅವುಗಳನ್ನು ಉಪಯೋಗಿಸಿದಾಗ ಆರೋಗ್ಯದ ಸಮಸ್ಯೆಗಳನ್ನು ಸುಧಾರಿಸಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ವತಿಯಿಂದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ವಿಶ್ವ ಆಹಾರ ದಿನಾಚರಣೆ- 2024ರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
1960 ರಿಂದ 1965 ರ ಅವಧಿಯಲ್ಲಿ ನಾನು ಪ್ರೌಢಶಾಲಾ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ 4 ನಾಲ್ಕು ವರ್ಷಗಳ ಕಾಲ ಮಳೆ ಅಭಾವವಾಗಿತ್ತು ಅಂದು ನಾನು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದೆ ಎಂದರು. ನಂತರ ಅಂದಿನ ಪ್ರಧಾನಿ ಲಾಲ ಬಹಾದೂರ್ ಶಾಸ್ತ್ರಿ ಅವರು ದೇಶದಲ್ಲಿ ಆಹಾರದ ಕೊರತೆ ಇದ್ದಾಗ ಜನರು ಒಂದು ಒತ್ತಿನ ಊಟವನ್ನು ಬಿಡಬೇಕು ಎಂಬ ಕರೆ ನೀಡಿದ್ದರು. ನಂತರ ಎಲ್ಲರೂ ಅದನ್ನು ಅನುಸರಿಸಿ ಆಹಾರದ ಅಭಾವವನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಿದ್ದರು. ಪ್ರಸ್ತುತದ ನಮ್ಮ ಭಾರತ ದೇಶದಲ್ಲಿ ಮೂರು ವರ್ಷಗಳಿಗೆ ಆಗುವಷ್ಟು ಆಹಾರ ದವಸದಾನ್ಯಗಳನ್ನು ನಾವು ಶೇಖರಣೆ ಮಾಡಿದ್ದೇವೆ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವಷ್ಟು ಬಲಿಷ್ಠ ವಾಗಿದ್ದೇವೆ. ಸಿರಿದಾನ್ಯಗಳ ಬೆಳೆಯುವ ಪ್ರಮಾಣ ಕಡಿಮೆಯಾಗಿದ್ದು, ಇವನ್ನು ರೈತರು ತಮ್ಮ ಜಮೀನಿನಲ್ಲಿ ನವಣೆ, ಆರ್ಕಾ,ರಾಗಿ ಭತ್ತ, ಸಜ್ಜೆ ಮುಂತಾದ ಧಾನ್ಯಗಳನ್ನು ಬೆಳೆಯುವ ಕಡೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು
ವಿಶ್ವ ಆಹಾರ ದಿನ (World Food Day) ವಿಶ್ವಾದ್ಯಂತ ಅಕ್ಟೋಬರ್ 16ರಂದು ಆಚರಿಸಲಾಗುತ್ತದೆ. 1945ರಲ್ಲಿ ಸಂಯುಕ್ತ ರಾಷ್ಟ್ರಗಳ ಆಹಾರ ಮತ್ತು ಕೃಷಿ ಸಂಘಟನೆಯ (FAO) ಸ್ಥಾಪನೆಯನ್ನು ಗೌರವಿಸುವುದಾಗಿ ಈ ದಿನವನ್ನು ನಿಶ್ಚಿತಗೊಳಿಸಲಾಗಿದೆ ಎಂದರು. ಆಹಾರದ ಮಹತ್ವ, ಜನರ ಭಕ್ಷ್ಯಮಾನದ ಹಕ್ಕು, ಹಸಿವು ಹಾಗೂ ದಾರಿದ್ರ್ಯ ನಿರ್ಮೂಲನೆಗೆ ಜಾಗೃತಿ ಮೂಡಿಸುವುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್, ಸಿಂಡಿಕೇಟ್ ಸದಸ್ಯರಾದ ಪ್ರಭಾಕರ ಶೆಟ್ಟಿ,ಹರೀಶ್,ಚಂದ್ರೇಗೌಡ, ನಾರಾಯಣಸ್ವಾಮಿ, ಡೀನ್ ಪ್ರಕಾಶ್, ಸಂಶೋಧನಾ ನಿರ್ದೇಶಕ ಶಿವರಾಮ್, ಪ್ರಾಧ್ಯಾಪಕ ಉಷಾ ರವೀಂದ್ರ, ಕಲ್ಪನಾ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…