ಕೊರೋನಾದಿಂದಾಗಿ ಲಾಕ್ಡೌನ್ ಘೋಷಣೆ ಮಾಡಿದ ಬಳಿಕ ಮಾರ್ಚ್ ತಿಂಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಅದರ ನಂತರ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು, ಊಹಾಪೋಹದ ವರದಿಗಳು ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.
Advertisement
ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
Advertisement
ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement