ಸದ್ಯಕ್ಕೆ ಶಾಲಾ ಕಾಲೇಜು ಆರಂಭದ ಬಗ್ಗೆ ಯಾವುದೇ ಯೋಚನೆ ಇಲ್ಲ: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

September 29, 2020
12:43 PM
ಕೊರೋನಾದಿಂದಾಗಿ ಲಾಕ್​ಡೌನ್ ಘೋಷಣೆ ಮಾಡಿದ ಬಳಿಕ ಮಾರ್ಚ್​ ತಿಂಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಅದರ ನಂತರ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು, ಊಹಾಪೋಹದ ವರದಿಗಳು ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ.  ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.  ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror