ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ವರದಿ ಬಹಿರಂಗ ಪಡಿಸಿದೆ. ಇದೇ ವೇಳೆ ಜೀ ನ್ಯೂಸ್ ಹಾಗೂ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.
ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ. ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.
ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.
ಇದೇ ವೇಳೆ ಜೀ ನ್ಯೂಸ್ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್ 88-98 ಸ್ಥಾನ ಪಡೆಯಲಿದೆ. ಜೆಡಿಎಸ್ 2-7 ಸ್ಥಾನ ಪಡೆಯಲಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…