Advertisement
ಸುದ್ದಿಗಳು

ಚುನಾವಣಾ ಕಣ | ಎಬಿಪಿ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದ್ದೇನು ? | ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವೇ ? | ಬಿಜೆಪಿ ಮತ್ತೆ ಅಧಿಕಾರ ಪಡೆಯುತ್ತಾ… ? | ರಾಜ್ಯದ ಬಿಜೆಪಿ ಸರ್ಕಾರ ಕಳಪೆ ಎಂದ ಜನ..! |

Share

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್‌ ನಡೆಸಿದ ಸಮೀಕ್ಷೆಯಲ್ಲಿ  ವರದಿ ಬಹಿರಂಗ ಪಡಿಸಿದೆ.  ಇದೇ ವೇಳೆ  ಜೀ ನ್ಯೂಸ್‌ ಹಾಗೂ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ  ತಿಳಿಸಿದೆ.

ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ.  ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.

ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು  ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.

ಇದೇ ವೇಳೆ ಜೀ ನ್ಯೂಸ್‌ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ  ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್‌ 88-98 ಸ್ಥಾನ ಪಡೆಯಲಿದೆ. ಜೆಡಿಎಸ್‌ 2-7 ಸ್ಥಾನ ಪಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

12 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago