ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ.23 ರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕರಿಸಲಿದ್ದಾರೆ.
ಸುಳ್ಯ ತಾಲೂಕಿನ ದೂರುಗಳನ್ನು ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಮೇ.23ರ ಸೋಮವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಮೇ.24ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕಿಗೆ ಸಂಬಂಧಿಸಿದಂತೆ ಮೇ.24ರ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಮೇ.25ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರ ವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…