ರಾಜ್ಯದಾದ್ಯಂತ ಮುಂಗಾರು ಮಳೆ(Mansoon Rain) ಚುರುಕುಗೊಳ್ಳದಿದ್ದರೂ,ಮಡಿಕೇರಿ(Madikeri) ಉತ್ತರ ಕನ್ನಡ(Uttar kannada), ಉಡುಪಿ(Udupi), ಮಂಗಳೂರು (Mangaluru) ಸೇರಿದಂತೆ ಮಲೆನಾಡು, ಕರಾವಳಿ(coastal) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ನದಿ ನೀರು ಹೆಚ್ಚಳವಾಗಿ ಅಂಕೋಲ ತಾಲೂಕಿನ ಬಿಳೆಹೊಂಗಿ, ಹೊನ್ನೆಬೈಲು, ಮಂಜುಗುಣಿಯಲ್ಲಿ ರಸ್ತೆ ಮತ್ತು ಮನೆಗಳು ಜಲಾವೃತವಾಗಿವೆ. ಹೊನ್ನೆಬೈಲಿನಲ್ಲಿ 20 ಮನೆ ಜಲಾವೃತವಾಗಿದ್ದು, ಬಿಳೆಹೊಂಗಿ, ಹೊನ್ನೆಬೈಲು, ಶಿಂಗನಮಕ್ಕಿ ಮಂಜುಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ.
ಈ ಭಾಗದಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ಮಾತ್ರ ರಜೆ ನೀಡಿದ್ದು, ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಡಳಿತ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವ ಕೈಯಲ್ಲಿ ಹಿಡಿದುಕೊಂಡು ದೋಣಿಯಲ್ಲಿ ಹೋಗಬೇಕಾಗುತ್ತದೆ. ನೆರೆ ಇದ್ದರೂ ರಜೆ ನೀಡಿಲ್ಲ ಓಡಾಟಕ್ಕೆ ದೋಣಿ ಇಲ್ಲ. ಸೂಕ್ತ ಮೂಲಭೂತ ಸೌಕರ್ಯ ಒದಗಿಸಿ ಎಂದು ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಸಮುದ್ರದ ಅಲೆಯ ಹೊಡೆತಕ್ಕೆ ನಿರ್ಮಾಣ ಹಂತದಲ್ಲಿದ್ದ ನಾಡದೋಣಿ ಮೀನಿಗಾರಿಕಾ ಜೆಟ್ಟಿ ಸಮುದ್ರ ಪಾಲಾಗಿದೆ. ಹೊರವಲಯದ ಕುಳಾಯಿ ಸಮುದ್ರ ತೀರದಲ್ಲಿ 184 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಜೆಟ್ಟಿಯ ಒಂದು ಭಾಗ ಸಮುದ್ರ ಪಾಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಜೋರಾಗಿ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿ ಜೋರಾದ ಮಳೆಯ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಅಲ್ಲದೇ ನದಿ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ ಈ ಹಿನ್ನೆಲೆ ಕಾವೇರಿ ನದಿ ಹಾಗೂ ಹಾರಂಗಿ ಜಲಾಶಯಕ್ಕೆ ಜೀವಕಳೆ ಬಂದಿದೆ. ಮಡಿಕೇರಿ (Madikeri) ತಾಲೂಕಿನ ಹಮ್ಮಿಹಾಲ, ಮುಟ್ಲು, ಕಾಲೂರು, ಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಾಗಿ ನೀರು ಹರಿದು ಬರುತ್ತಿದೆ. ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 2,842 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
– ಅಂತರ್ಜಾಲ ಮಾಹಿತಿ
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…