#WeatherMirror | 05-07-2023 | ಕರಾವಳಿಯಾದ್ಯಂತ  ನಿರಂತರ  ಮಳೆ | ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು | ರೈತರ ಮೊಗದಲ್ಲಿ ಮೂಡಿದ ಮಂದಹಾಸ |

July 5, 2023
12:45 PM
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಕೆಯಾಗಿದೆ. ನಾಳೆಯೂ ಉತ್ತಮ ಮಳೆಯಾಗಲಿದೆ.

ಮುಂಗಾರು #Mansoon ಮಳೆ ಕಳೆದ ಎರಡು ದಿನಗಳಿಂದ ಚುರುಕುಗೊಂಡಿದೆ. ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಮುಂದಿವರೆದಿದೆ. ಕರ್ನಾಟಕದ ವಿವಿಧೆಡೆ ಉತ್ತಮ ಮಳೆ #Rain ಯಾಗುತ್ತಿದೆ.  ಕರಾವಳಿಯಾದ್ಯಂತ #CoastalKarnataka ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ#Bengaluru ಜಿಟಿಜಿಟಿ ಮಳೆಯಾಗಿದ್ದು, ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಕಾಸರಗೋಡು ಸಹಿತ ಕರಾವಳಿಯಾದ್ಯಂತ  ನಿರಂತರ  ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಮುನ್ಸೂಚನೆ ಇದೆ.

ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.

ಕಡಲತೀರದತ್ತ ತೆರಳಬೇಡಿ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.

ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ  ನಿರಂತರ  ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ  ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror