ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.
ಕಡಲತೀರದತ್ತ ತೆರಳಬೇಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.
ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ ನಿರಂತರ ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…