Advertisement
ವೆದರ್ ಮಿರರ್

#WeatherMirror | 05-07-2023 | ಕರಾವಳಿಯಾದ್ಯಂತ  ನಿರಂತರ  ಮಳೆ | ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು | ರೈತರ ಮೊಗದಲ್ಲಿ ಮೂಡಿದ ಮಂದಹಾಸ |

Share

ಮುಂಗಾರು #Mansoon ಮಳೆ ಕಳೆದ ಎರಡು ದಿನಗಳಿಂದ ಚುರುಕುಗೊಂಡಿದೆ. ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಮುಂದಿವರೆದಿದೆ. ಕರ್ನಾಟಕದ ವಿವಿಧೆಡೆ ಉತ್ತಮ ಮಳೆ #Rain ಯಾಗುತ್ತಿದೆ.  ಕರಾವಳಿಯಾದ್ಯಂತ #CoastalKarnataka ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ#Bengaluru ಜಿಟಿಜಿಟಿ ಮಳೆಯಾಗಿದ್ದು, ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಕಾಸರಗೋಡು ಸಹಿತ ಕರಾವಳಿಯಾದ್ಯಂತ  ನಿರಂತರ  ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಮುನ್ಸೂಚನೆ ಇದೆ.

ಐದು ದಿನಗಳ ಕಾಲ ಅಲರ್ಟ್ : ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಮುಂಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಈ ಎಲ್ಲ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ನೀಡಲಾಗಿದೆ.

ಕಡಲತೀರದತ್ತ ತೆರಳಬೇಡಿ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ ಕವಳಿಕಟ್ಟೆ ಘೋಷಣೆ ಮಾಡಿದ್ದಾರೆ. ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆ ಸ್ಥಗಿತಗೊಂಡಿದ್ದು ಕಡಲತೀರದತ್ತ ತೆರಳದಂತೆ ಪ್ರವಾಸಿಗರಿಗೆ ನಿಷೇಧ ವಿಧಿಸಲಾಗಿದೆ.

ಕರಾವಳಿಯಾದ್ಯಂತ ಭಾರಿ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿರಲಿದ್ದು ಕಾಸರಗೋಡು ಸಹಿತ ಕರಾವಳಿಯಾದ್ಯಂತ  ನಿರಂತರ  ಮಳೆ ಮುಂದುವರೆಯಲಿದೆ. ರಾತ್ರಿಯೂ ಮಳೆಯಾಗಬಹುದು. ಅಲ್ಲಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮುಂದಿನ 2 ದಿನ ಮಳೆ ಮುಂದುವರೆದು ನಂತರ ಮಳೆ ಕಡಿಮೆಯಾಗಬಹುದು.ಜುಲೈ 10 ರಿಂದ 18 ತನಕ ಮಳೆ  ಕಡಿಮೆಯಾಗಿ ಆಗಾಗ ಬಿಸಿಲು ಬರಬಹುದು.ಪ್ರತಿದಿನ ಒಂದೆರಡು ಸಾಮಾನ್ಯ ಮಳೆ ಮುಂದುವರೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

7 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

11 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 days ago