ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು | ಉಡುಪಿಯ ಈ ಬೀಚ್‌ಗಳಿಗೆ ಪ್ರವೇಶ ನಿರ್ಬಂಧ..!

June 15, 2024
1:15 PM

ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್‌ಹೌಸ್‌ (Light House) ಹೊಂದಿರುವ ಕಾಪು (Kaup Beach) ಬೀಚ್‌ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

Advertisement
Advertisement

ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.

ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್‌ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್‌ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್‌ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್‌ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group