ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದೆ. ಮಲೆನಾಡು, ಕರಾವಳಿ(Coastal) ಸೇರದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ(Rain). ಮುಂಗಾರು (Monsoon) ಚುರುಕುಗೊಳ್ಳುತ್ತಲೇ ಮುಂಜಾಗ್ರತಾ ಕ್ರಮವಾಗಿ ಉಡುಪಿ(Udupi) ಜಿಲ್ಲೆಯ ಪ್ರಮುಖ ಬೀಚ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಲ್ಪೆ (Malpe Beach) ಹಾಗೂ ಲೈಟ್‌ಹೌಸ್ (Light House) ಹೊಂದಿರುವ ಕಾಪು (Kaup Beach) ಬೀಚ್‌ಗಳಿಗೆ ತೆರಳದಂತೆ ಪ್ರವೇಶ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಸಮುದ್ರವೂ ಪ್ರಕ್ಷುಬ್ಧಗೊಳ್ಳುತ್ತಿದ್ದು ಮುಂದೆ ಮಳೆ ತೀವ್ರಗೊಳ್ಳುತ್ತಲೇ ಇನ್ನಷ್ಟು ಅಬ್ಬರ ಹೆಚ್ಚಲಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆ. ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಿದೆ.
ಕಾಪು ಸಮುದ್ರ ತೀರದ ದೀಪಸ್ತಂಭದ ಬಳಿ ಸುಮಾರು 500 ಮೀಟರ್ ಉದ್ದಕ್ಕೆ ಕಂಬಗಳನ್ನು ನೆಟ್ಟು ಹಗ್ಗಗಳನ್ನು ಕಟ್ಟಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಈ ಬೀಚ್‌ಗಳಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಬೀಚ್‌ನಲ್ಲಿ ಗಸ್ತು ತಿರುಗುವ ಜೀವ ರಕ್ಷಕರು ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಿದ್ಧಾರೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ 7 ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿ ನಿರ್ಮಿಸಲಾಗಿದೆ. ಅದರ ಮೇಲೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ.
ರಾಜ್ಯದಲ್ಲಿ ಈಗಿನಂತೆ ಎಪ್ರಿಲ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 9…
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ…