ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ನಿನ್ನೆ ತಡರಾತ್ರಿ ಬಿದ್ದಿತ್ತು. ಕಾರು ಶೋಧ ಕಾರ್ಯದ ಬಳಿಕ ಇದೀಗ ಸೇತುವೆಯಿಂದ ಸುಮಾರು 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಕಾರಲ್ಲಿ ಮೂರು ಮಂದಿ ಇದ್ದಿರುವ ಶಂಕೆ ಇದೆ. ತೆರವು ಕಾರ್ಯಾಚರಣೆ ಮುಂದುವರಿದಿದೆ.
ಮಂಜೇಶ್ವರ – ಪುತ್ತೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿತ್ತು. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಘಟನೆ ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ. ಹೀಗಾಗಿ ಕಾರು ಬಿದ್ದಿರುವ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ಮುಂದುವರಿದಿತ್ತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.