ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಯುವಕ ಹರಿಹರದ ಚಂದ್ರಶೇಖರ್ ಎಂದು ತಿಳಿದುಬಂದಿದೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಬಳಿಕ ತಪಾಸಣೆಯ ವೇಳೆ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಬಡ ಕುಟುಂಬದ ಚಂದ್ರಶೇಖರ್ ಅವರು ಅಡಿಕೆ ಕೊಯ್ಲು, ಔಷಧಿ ಸಿಂಪಡಣೆ ಸೇರಿದಂತೆ ದೈನಂದಿನ ಕೆಲಸಕ್ಕೆ ಹೋಗುತ್ತಿದ್ದರು. ವೃದ್ದ ತಂದೆ ತಾಯಿ ಜೊತೆ ವಾಸಿಸುತ್ತಿದ್ದ ಚಂದ್ರಶೇಖರ್ ಕುಟುಂಬಕ್ಕೆ ಆಧಾರವಾಗಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel