ಮಂಗಳೂರು ಜಿಲ್ಲೆಯ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಾದ ಬಳಿಕ ಮಿದುಳು ನಿಷ್ಕ್ರಿಯಗೊಂಡಿದ್ದು ತಿಳಿದು ಕುಟುಂಬಸ್ಥರು ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ.
ಶನಿವಾರ ತಡರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡ ಯುವಕ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದರು. ಹೀಗಾಗಿ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel