ರೈತರಿಗೆ ‘ಎನ್‌ಪಿಕೆ 17 :17 :17 ‘ ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ ಆರೋಪದಡಿ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಎರಡು ಮಳಿಗೆ ಮಾಲೀಕರು, ಗೊಬ್ಬರ ಪೂರೈಕೆದಾರರು ಹಾಗೂ ತಯಾರಕರ ವಿರುದ್ಧ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.ಕಳಪೆ ಗೊಬ್ಬರವೆಂಬುದು ಗಮನಕ್ಕೆ ಬರುತ್ತಿದ್ದಂತೆ ಮಳಿಗೆಯ ಮೇಲೆ ದಾಳಿ ಮಾಡಿ ಗೊಬ್ಬರವನ್ನು ಜಪ್ತಿ ಮಾಡಲಾಗಿತ್ತು. ಅಗತ್ಯ ವಸ್ತುಗಳ ಕಾಯ್ದೆ1955 ರಡಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪುರಾವೆಗಳ ಸಮೇತ ಮೊಕದ್ದಮೆ ಹೂಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel