ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ

November 21, 2024
7:36 PM

ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್ ಹೇಳಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 100ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿದೆ. ಇನ್ನೂ 40 ಪ್ರಕರಣಗಳು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ವಿಚಾರಣೆಯ ಹಂತದಲ್ಲಿದೆ ಎಂದು ತಿಳಿಸಿದರು.  ಸರ್ಕಾರಿ ಆದೇಶ ಉಲ್ಲಂಘಿಸಿ ಆರಂಭಿಸುವ ನಕಲಿ ಕ್ಲಿನಿಕ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ. ಪ್ರಾಣದೊಂದಿಗೆ ಚೆಲ್ಲಾಟವಾಡಿ ಜನರ ಹಣ ದೋಚುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 45 ನಕಲಿ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ. 22 ಪ್ರಕರಣಗಳಲ್ಲಿ ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಕಲಿ ಕ್ಲಿನಿಕ್ ಕಡಿವಾಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು. ಮುಳಬಾಗಿಲು, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ನಕಲಿ ಕ್ಲಿನಿಕ್‌ಗಳು ಕಂಡು ಬಂದಿದ್ದು ಅದರಲ್ಲೂ ಗಡಿ ಭಾಗದ ರಾಯಲ್ಪಾಡು, ಮಾಸ್ತಿ ಮತ್ತು ನಂಗಲಿ ಭಾಗದಲ್ಲಿ ನಕಲಿ ಕ್ಲಿನಿಕ್ ಗಳು ವಿಪರೀತವಾಗಿದೆ. ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ತಾಲ್ಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಗುಜ್ಜೆ ಬೋಂಡಾ
April 2, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group