ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 100ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿದೆ. ಇನ್ನೂ 40 ಪ್ರಕರಣಗಳು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ವಿಚಾರಣೆಯ ಹಂತದಲ್ಲಿದೆ ಎಂದು ತಿಳಿಸಿದರು. ಸರ್ಕಾರಿ ಆದೇಶ ಉಲ್ಲಂಘಿಸಿ ಆರಂಭಿಸುವ ನಕಲಿ ಕ್ಲಿನಿಕ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ. ಪ್ರಾಣದೊಂದಿಗೆ ಚೆಲ್ಲಾಟವಾಡಿ ಜನರ ಹಣ ದೋಚುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 45 ನಕಲಿ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ. 22 ಪ್ರಕರಣಗಳಲ್ಲಿ ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಕಲಿ ಕ್ಲಿನಿಕ್ ಕಡಿವಾಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು. ಮುಳಬಾಗಿಲು, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ನಕಲಿ ಕ್ಲಿನಿಕ್‌ಗಳು ಕಂಡು ಬಂದಿದ್ದು ಅದರಲ್ಲೂ ಗಡಿ ಭಾಗದ ರಾಯಲ್ಪಾಡು, ಮಾಸ್ತಿ ಮತ್ತು ನಂಗಲಿ ಭಾಗದಲ್ಲಿ ನಕಲಿ ಕ್ಲಿನಿಕ್ ಗಳು ವಿಪರೀತವಾಗಿದೆ. ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ತಾಲ್ಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…