ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 100ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡಿದೆ. ಇನ್ನೂ 40 ಪ್ರಕರಣಗಳು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ವಿಚಾರಣೆಯ ಹಂತದಲ್ಲಿದೆ ಎಂದು ತಿಳಿಸಿದರು. ಸರ್ಕಾರಿ ಆದೇಶ ಉಲ್ಲಂಘಿಸಿ ಆರಂಭಿಸುವ ನಕಲಿ ಕ್ಲಿನಿಕ್ಗಳ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ. ಪ್ರಾಣದೊಂದಿಗೆ ಚೆಲ್ಲಾಟವಾಡಿ ಜನರ ಹಣ ದೋಚುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 45 ನಕಲಿ ಕ್ಲಿನಿಕ್ಗಳನ್ನು ಮುಚ್ಚಿಸಲಾಗಿದೆ. 22 ಪ್ರಕರಣಗಳಲ್ಲಿ ಕ್ರಮಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಕಲಿ ಕ್ಲಿನಿಕ್ ಕಡಿವಾಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು. ಮುಳಬಾಗಿಲು, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ಹೆಚ್ಚು ನಕಲಿ ಕ್ಲಿನಿಕ್ಗಳು ಕಂಡು ಬಂದಿದ್ದು ಅದರಲ್ಲೂ ಗಡಿ ಭಾಗದ ರಾಯಲ್ಪಾಡು, ಮಾಸ್ತಿ ಮತ್ತು ನಂಗಲಿ ಭಾಗದಲ್ಲಿ ನಕಲಿ ಕ್ಲಿನಿಕ್ ಗಳು ವಿಪರೀತವಾಗಿದೆ. ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ತಾಲ್ಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಅಡಿಕೆಯ ಆರೋಗ್ಯ ಸಂಬಂಧಿತ ಸಾಧ್ಯತೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ತ್ಯಾಗದಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ 500 ಎಕರೆ ಪ್ರದೇಶದಲ್ಲಿ…
ಅಡಿಕೆ ಕೃಷಿಯಲ್ಲಿನ ರೋಗಬಾಧೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯನ್ನು ಎದುರಿಸಲು ಬೆಳೆಗಾರರು ಮಿಶ್ರ ಬೆಳೆ…
ಉತ್ತರ ಭಾರತದಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮ ಕರ್ನಾಟಕದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು,…
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಅಡಿಕೆ ಬೆಳೆ ವಿಸ್ತರಣೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು…
ಕಬ್ಬು ಬೆಳೆಗಾರರ ಬೇಡಿಕೆಗಳು ಮತ್ತು ಕಬ್ಬಿನ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಡಿ.ಕೆ.…