ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

September 23, 2024
1:06 PM
3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ , 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ - ಸಚಿವ ಈಶ್ವರ ಖಂಡ್ರೆ.

ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್‌ ಎಚ್‌ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror