ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…