ದಕ್ಷಿಣ ಕನ್ನಡಕ್ಕೆ ಉಸ್ತುವಾರಿ ಸಚಿವರ ಮೊದಲ ಭೇಟಿ | ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ | ಖಡಕ್ ವಾರ್ನಿಂಗ್ ಕೊಟ್ಟ ಉಸ್ತುವಾರಿ ಸಚಿವರು |

June 11, 2023
11:56 AM

ಕೋಮು ದ್ವೇಷ, ನೈತಿಕ ಪೊಲೀಸ್ ಗಿರಿ, ಜಾತಿ ಜಗಳ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನಿಂದಲೂ ಕೆಟ್ಟ ಹೆಸರು ಇದ್ದದ್ದೆ. ಯಾವುದೇ ಕ್ರಮಕ್ಕೂ ಈ ಕಿರಿ ಕಿರಿ ಜಗ್ಗಿದ್ದು ಅಷ್ಟಕಷ್ಟೇ.. ಈಗ ನೂತನವಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಚಿವ ದಿನೇಶ್ ಗುಂಡೂರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದೆ. ಅವರು ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ.

Advertisement
Advertisement

‘ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಯೂತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರು ‘ಜಿಲ್ಲೆ ಜನರ ನಾಡಿ‌ಮಿಡಿತ ಸ್ವಲ್ಪವಾದರೂ ನನಗೆ ಗೊತ್ತಿದೆ. ದಕ್ಷಿಣ ಕನ್ನಡ ಈ ರಾಜ್ಯದ ಅತ್ಯಂತ ಪ್ರತಿಷ್ಠಿತ ಜಿಲ್ಲೆ.​ ಆಗಾಗ ಬಂದು ಜನರ ಜೊತೆ ಸಂಪರ್ಕದಲ್ಲಿ ಇರುತ್ತೇನೆ, ಅಭಿವೃದ್ಧಿ, ಯೋಜನೆಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಾನೂನು‌ ಉಲ್ಲಂಘಿಸಿದವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದರು.

ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಇನ್ನು ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಗೃಹ ಸಚಿವರು ಆ್ಯಂಟಿ‌ ಕಮ್ಯುನಲ್​ ವಿಂಗ್ ಸ್ಥಾಪಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಇದು ದ್ವೇಷ ಸಾಧಿಸೋ ವಿಂಗ್ ಆಗಬಾರದು, ಸಾಮರಸ್ಯ ಕಾಪಾಡೋ ದಳ ಆಗಬೇಕು ಎಂದರು. ಇದೇ ವೇಳೆ ಬಿಜೆಪಿ ಅವಧಿಯಲ್ಲಿ ಕೆಲ ಸಂಘ ಸಂಸ್ಥೆಗಳಿಗೆ ಭೂಮಿ ಪರಭಾರೆ ವಿಚಾರ ‘ಭೂಮಿ ಹಂಚಿಕೆ ವೇಳೆ ಕೆಲ ಲೋಪದೋಷಗಳು ಆಗಿರುವ ಮಾಹಿತಿ ಇದೆ. ಕಂದಾಯ ಇಲಾಖೆ ಈ ಲೋಪದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು ಎಂದು ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​​ ಹೇಳಿದರು.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?
May 24, 2025
9:13 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ
May 24, 2025
5:42 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group